ಬೆಂಗಳೂರು:- ಇಂದು ಮುಂಜಾನೆಯಿಂದಲೂ ರಾಜಧಾನಿ ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆ ಆಗುತ್ತಿದ್ದು, ಕಚೇರಿಗೆ ಹೋಗುವವರು, ವಾಹನ ಸವಾರರು ಪರದಾಟ ನಡೆಸಿದ್ದಾರೆ.
Advertisement
ಇಂದು ನಗರದ ಮಲ್ಲೇಶ್ವರಂ, ಮೆಜೆಸ್ಟಿಕ್, ಶಾಂತಿನಗರ, ಯಶವಂತರಪುರ ಸೇರಿ ಹಲವೆಡೆ ಮಳೆ ಸುರಿಯುತ್ತಿದೆ. ತುಂತುರು ಮಳೆಯ ನಡುವೆಯೇ ಕೆಲಸ, ಕಚೇರಿಗಳಿಗೆ ಜನ ತೆರಳುತ್ತಿದ್ದಾರೆ.
ಇಂದು ಬೆಂಗಳೂರಿನಲ್ಲಿ 25 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಶ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇನ್ನೂ ಕೆಲವು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


