ವಿಜಯಸಾಕ್ಷಿ ಸುದ್ದಿ, ಧಾರವಾಡ: ಧಾರವಾಡ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಅಧ್ಯಕ್ಷತೆಯಲ್ಲಿ ಶನಿವಾರ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿತು.
Advertisement
ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮೀ, ಅನ್ನ ಭಾಗ್ಯ, ಗೃಹ ಜ್ಯೋತಿ ಮತ್ತು ಯುವ ನಿಧಿ ಕಾರ್ಯಕ್ರಮಗಳ ಕುರಿತು ಇಲಾಖೆ ಅಧಿಕಾರಿಗಳು ಪ್ರಗತಿ ವರದಿ ಸಲ್ಲಿಸಿದರು. ಪ್ರಾಧಿಕಾರದ ಸದಸ್ಯರು ಚರ್ಚಿಸಿ, ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಜಿಲ್ಲಾ ಪ್ರಾಧಿಕಾರದ ಉಪಾಧ್ಯಕ್ಷರು, ಸದಸ್ಯರು, ಪಂಚ ಗ್ಯಾರಂಟಿ ಯೋಜನೆಗಳ ಅಧಿಕಾರಿಗಳು ವೇದಿಕೆಯಲ್ಲಿದ್ದರು.
ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಿ.ಎಸ್. ಮೂಗನೂರಮಠ ಸ್ವಾಗತಿಸಿ, ಸಭೆ ನಿರ್ವಹಿಸಿದರು.