ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚಗ್ಯಾರಂಟಿ ಯೋಜನೆಗಳು ರಾಜ್ಯದ ಅಭಿವೃದ್ಧಿಗೆ ಪೂರಕವಾಗಿವೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
ಗುರುವಾರ ಸರ್ಕ್ಯೂಟ್ ಹೌಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ಸಮಾಜದ ಎಲ್ಲ ವರ್ಗದವರಿಗೆ ತಲುಪುತ್ತಿವೆ. ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ತತ್ವದಡಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಸರ್ಕಾರದ ಯೋಜನೆಗಳು ನೇರವಾಗಿ ಜನರಿಗೆ ತಲುಪುತ್ತಿವೆ. ಶಕ್ತಿ ಯೋಜನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗಿದೆ. ಈಗಾಗಲೇ 600 ಕೋಟಿಗೂ ಅಧಿಕ ಮಹಿಳೆಯರು ಶಕ್ತಿ ಯೋಜನೆಯಡಿ ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹ ಜ್ಯೋತಿ ಹಾಗೂ ಯುವ ನಿಧಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಮುಂದಿನ ವರ್ಷಗಳಲ್ಲಿ ಸಹ ಯೋಜನೆಗಳನ್ನು ಯಶಸ್ವಿಯಾಗಿ ಮುಂದುವರಿಸಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಅನಿಲಕುಮಾರ ಪಾಟೀಲ, ಚಂದ್ರಶೇಖರ ಜುಟ್ಟಲ ಸೇರಿದಂತೆ ಇತರರು ಹಾಜರಿದ್ದರು.



