ನಿಮ್ಮೂರಲ್ಲೇ ಉದ್ಯೋಗ ಖಾತ್ರಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗ್ರಾಮೀಣ ಜನರು ಬೇಸಿಗೆಯಲ್ಲಿ ನಗರ ಪ್ರದೇಶಗಳಿಗೆ ಗುಳೆ ಹೋಗುವುದನ್ನು ತಪ್ಪಿಸಲು ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ‘ದುಡಿಯೋಣ ಬಾ’ ಅಭಿಯಾನ ಆರಂಭಿಸಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೊರವನವರ ತಿಳಿಸಿದ್ದಾರೆ.

Advertisement

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಗದಗ ತಾಲೂಕಿನ ಬಹುತೇಕ ಪಂಚಾಯಿತಿಗಳಲ್ಲಿ ಉದ್ಯೋಗ ಖಾತ್ರಿ ಕೆಲಸ ಆರಂಭಿಸಲಾಗಿದೆ. ನಿತ್ಯ 8000ಕ್ಕೂ ಹೆಚ್ಚು ಜನರು ಕೆಲಸ ನಿರ್ವಹಿಸುತ್ತಿದ್ದಾರೆ. ಆಯುಕ್ತಾಲಯದ ಆದೇಶದಂತೆ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಮೇ ತಿಂಗಳಾದ್ಯಂತ ಕೆಲಸ ಒದಗಿಸಲು ದುಡಿಯೋಣ ಬಾ ಅಭಿಯಾನ ಹಮ್ಮಿಕೊಳ್ಳಲು ಪಿಡಿಒ ಮತ್ತು ಎಲ್ಲ ಹಂತದ ನರೇಗಾ ಯೋಜನೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ತಾಲೂಕು ವ್ಯಾಪ್ತಿಯಲ್ಲಿ ಈಗಾಗಲೇ 1,16,930 ಮಾನವ ದಿನಗಳನ್ನು ಸೃಜನೆ ಮಾಡಲಾಗಿದೆ. ತಾಲೂಕಿನಲ್ಲಿ ಒಟ್ಟು 24,537 ಸಕ್ರಿಯ ಉದ್ಯೋಗ ಚೀಟಿಗಳಿದ್ದು, 50,440 ಸಕ್ರಿಯ ಕೂಲಿ ಕಾರ್ಮಿಕರು ಇದ್ದಾರೆ ಎಂದರು.

ಕೃಷಿ ಗ್ರಾಮೀಣ ಜನರ ಮೂಲ ಉದ್ಯೋಗ ಮುಂದಿನ ದಿನಗಳಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಾದ ಬೀಜ, ರಸಗೊಬ್ಬರ, ಮಕ್ಕಳನ್ನು ಶಾಲೆ/ಕಾಲೇಜಿಗೆ ದಾಖಲಿಸಲು ಶುಲ್ಕ ಪಾವತಿಸಲು ಉದ್ಯೋಗ ಖಾತ್ರಿಯಲ್ಲಿ ದುಡಿದ ಹಣವನ್ನು ಬಳಕೆ ಮಾಡಬಹುದು. ಇದಲ್ಲದೇ ಇನ್ನಿತರೆ ಜೀವನದ ವೆಚ್ಚಗಳಿಗೆ ಬಳಸಿಕೊಳ್ಳಬಹುದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here