ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನ ಅರ್ಹ ಪ್ರತಿಯೊಬ್ಬರಿಗೂ ತಲುಪಬೇಕಾಗಿದ್ದು, ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಜುಲೈ 11ರಂದು ತಾ.ಪಂ ಸಭಾ ಭವನದಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ನಾಗರಾಜ ಮಡಿವಾಳರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ಹಾಗೂ ಪಂಚ ಗ್ಯಾರಂಟಿ ಸಮಿತಿ ರಾಜ್ಯಾಧ್ಯಕ್ಷ ಎಚ್.ಎಂ. ರೇವಣ್ಣ, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ. ಪಾಟೀಲರು, ಪ್ರತಿ ತಾಲೂಕಿನಲ್ಲಿ ಪಂಚ ಗ್ಯಾರಂಟಿ ಸಮಿತಿ ವತಿಯಿಂದ ಜನತಾದರ್ಶನ ಮಾಡಿ ಯೋಜನೆಯಿಂದ ಯಾರೂ ವಂಚಿತರಾಗದಂತೆ ಕಾರ್ಯನಿರ್ವಹಿಸಬೇಕು ಎಂದಿದ್ದಾರೆ. ಈ ನಿಟ್ಟಿನಲ್ಲಿ ಜು.11ರಂದು ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ ಪಂಚ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಜನತಾ ದರ್ಶನ ನಡೆಯಲಿದೆ. ಗ್ಯಾರಂಟಿ ಯೋಜನೆಗೊಳಪಡುವ 5 ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾ ಅಧ್ಯಕ್ಷ ಬಿ.ಬಿ. ಅಸೂಟಿ, ಅನುಷ್ಠಾನ ಸಮಿತಿಯ ಸದಸ್ಯರು ಪಾಲ್ಗೊಳ್ಳುವರು.
ಲಕ್ಷ್ಮೇಶ್ವರ ಸೇರಿ ತಾಲೂಕಿನ 14 ಗ್ರಾ.ಪಂ ವ್ಯಾಪ್ತಿಯ ಗ್ಯಾರಂಟಿ ಯೋಜನೆಯ ಫಲಾನುಭವಿಗಳು, ಗ್ಯಾರಂಟಿ ಯೋಜನೆ ಪಡೆಯುವಲ್ಲಿ ಸಾಧ್ಯವಾಗಿರದವರು ತಮ್ಮ ಕುಂದು-ಕೊರತೆ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಮಾಹಿತಿಗಾಗಿ-9902109785 ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.