ಚಿತ್ರದುರ್ಗ: ಬೈಕ್ʼಗೆ ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದಲ್ಲಿ ಜರುಗಿದೆ. ರಂಗಪ್ಪ (43) ಮೃತ ದುರ್ದೈವಿಯಾಗಿದ್ದು, ಬಾಂಡ್ರಾವಿ ಗ್ರಾಮದ ಶಾಲೆಯಲ್ಲಿ ಅತಿಥಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದರು.
ಘಟನಾ ಸ್ಥಳಕ್ಕೆ ರಾಂಪುರ ಠಾಣೆ ಪಿಎಸ್‌ಐ ಮಹೇಶ್ ಹೊಸಪೇಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.



