ಬೆಂಗಳೂರಿನಲ್ಲಿ ಗುಂಡಿ ಅವಾಂತರ: ರಾತ್ರೋರಾತ್ರಿ ಡಿಕೆಶಿ ಸಿಟಿ ರೌಂಡ್ಸ್ – ಕಾಮಗಾರಿ ಪರಿಶೀಲನೆ!

0
Spread the love

ಬೆಂಗಳೂರು:- ಕಳೆದ ಹಲವು ದಿನಗಳಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಗುಂಡಿ ಮುಚ್ಚುವ ಕಾರ್ಯ ಮಾಡುತ್ತಿದೆ.

Advertisement

ಈ ನಡುವೆ ನಿನ್ನೆ ತಡರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಕಾಮಗಾರಿ ಪರಿಶೀಲನೆ ಮಾಡಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚುವ ಕಾರ್ಯಕ್ಕೆ ಬಿಬಿಎಂಪಿ ಪಣ ತೊಟ್ಟಿದ್ದು, ಯಲಹಂಕದ ಬಾಗಲೂರು ಮುಖ್ಯರಸ್ತೆ, ಎಂಎಸ್ ಪಾಳ್ಯದ ಸಂದೀಪ್ ಉಣ್ಣೀಕೃಷ್ಣನ್ ರೋಡ್ ಮತ್ತು ಈಜಿಪುರದ ಪ್ಲೈಓವರ್ ಕಾಮಗಾರಿಯ ವೀಕ್ಷಣೆ ಮಾಡಿದ ಡಿಕೆಶಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಸ್ತೆ ಗುಂಡಿಗಳನ್ನು ಮುಚ್ಚುವ ವಿಚಾರವಾಗಿ ನಗರದ ಶಾಸಕರೆಲ್ಲರೂ ಗಮನಕ್ಕೆ ತಂದಿದ್ದರು. ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ ರಸ್ತೆ ಗುಂಡಿ ಗಮನ ತಂತ್ರಾಂಶ ಸಿದ್ದಪಡಿಸಿದ್ದೇವೆ. ಪೊಲೀಸರಿಗೂ ಅವರ ಠಾಣೆಗಳ ವ್ಯಾಪ್ತಿಯಲ್ಲಿ ಗುಂಡಿಗಳಿರುವ ಪಟ್ಟಿ ಕೊಡಲು ತಿಳಿಸಲಾಗಿತ್ತು. ಆಪ್‌ನಲ್ಲಿ ನಾಗರೀಕರು ದೂರುಗಳನ್ನು ಸಲ್ಲಿಸುತ್ತಾರೆ ಎಂದು ತಿಳಿಸಿದರು.

ಇತ್ತೀಚೆಗೆ ಬಾಗಲೂರು ರಸ್ತೆಯಲ್ಲಿ ಹೋದಾಗ ರಸ್ತೆ ಸ್ಥಿತಿ ನೋಡಿ ಬೇಸರವಾಗಿತ್ತು. ನಗರದ ಎಲ್ಲಾ ಕಡೆ ರಸ್ತೆ ಗುಂಡಿ ಮುಚ್ಚುವ ಕೆಲಸ ಮಾಡಲಾಗುತ್ತಿದೆ. 5000ಕ್ಕೂ ಹೆಚ್ಚು ಗುಂಡಿಗಳನ್ನು ಗುರುತಿಸಲಾಗಿದ್ದು, ಅದರಲ್ಲಿ 4400 ರಸ್ತೆ ಗುಂಡಿಗಳನ್ನು ಆದ್ಯತೆ ಮೇಲೆ ಮುಗಿಸಲು ಸೂಚನೆ ನೀಡಲಾಗಿದೆ. ಅದರಂತೆ ಕಳೆದ 4 ದಿನಗಳಿಂದ 2200 ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಹೇಳಿದರು.

ನಗರದಲ್ಲಿ ಸ್ವಚ್ಛತೆ ಕಾಪಾಡುವ ಕೆಲಸ ಮಾಡಲಾಗುತ್ತಿದ್ದು, ಸ್ಕೈವಾಕ್‌ಗಳನ್ನು ಸ್ವಚ್ಛ ಮಾಡಲಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಿ ಹೋಗುವುದು ಮಾತ್ರವಲ್ಲ, ಗುಣಮಟ್ಟದ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಹಾಟ್ ಮಿಕ್ಸ್, ಕೋಲ್ಡ್ ಮಿಕ್ಸ್ ಹಾಗೂ ಇಕೋಫಿಕ್ಸ್ ಸೇರಿದಂತೆ ಮೂರೂ ಮಾದರಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಲಾಗುತ್ತಿದೆ ಎಂದರು.


Spread the love

LEAVE A REPLY

Please enter your comment!
Please enter your name here