ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ಪೊಲೀಸರ ಗುಂಡಿನ ಸದ್ದು ಕೇಳಿಬಂದಿದ್ದು, ಮಹಿಳೆಗೆ ಚಾಕು ಇರಿದಿದ್ದ ಆರೋಪಿ ಕಾಲಿಗೆ ಫೈರಿಂಗ್ ಮಾಡಲಾಗಿದೆ.
Advertisement
ವಿಚಾರಣೆ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗುವಾಗ ಕಾಲಿಗೆ ಗುಂಡೇಟು ಹೊಡೆಯಲಾಗಿದೆ.
ಗಾಯಾಳು ಮಹಿಳೆ ನೀಲಾ ಹಂಪಣ್ಣವರ್ ಮಗಳಿಗೆ ಮದುವೆಯಾಗುವಂತೆ ಪೀಡಿಸುತ್ತಿದ್ದ. ಈ ಹಿನ್ನಲೆ ನೀಲಾ ಅವರು ಮಹೇಶ್ಗೆ ಬುದ್ಧಿವಾದ ಹೇಳಿದ್ದರು. ಅಷ್ಟಕ್ಕೆ ಕೋಪಗೊಂಡ ಆರೋಪಿ ಮಹೇಶ್, ಮಹಿಳೆಗೆ ಚಾಕು ಇರಿದಿದ್ದ. ಬಳಿಕ ಆತನನ್ನು ಪೊಲೀಸರು ಬಂಧಿಸಿದ್ದರು
ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳು ಮಹೇಶ್ಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಶಶಿಕುಮಾರ್ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಬಳಿಕ ಘಟನೆ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.