ಉಡುಪಿ:- ಉಡುಪಿಯಯಲ್ಲಿ ಗುಂಡಿನ ಸದ್ದು ಕೇಳಿ ಬಂದಿದ್ದು, ನಕ್ಸಲ್ ಕ್ಯಾಪ್ಟನ್ ವಿಕ್ರಂ ಗೌಡನನ್ನು ಎನ್‌ಕೌಂಟರ್ ಮಾಡಿ ಕೊಲೆ ಮಾಡಲಾಗಿದೆ.
ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದ್ದು, ಹೆಬ್ರಿ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ನಕ್ಸಲ್ ಕಾರ್ಯಕರ್ತ ವಿಕ್ರಂ ಗೌಡನನ್ನು ಎನ್‌ಕೌಂಟರ್ ಮಾಡಲಾಗಿದೆ.
ನಕ್ಸಲ್ ನಾಯಕ ವಿಕ್ರಂಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನಕ್ಸಲ್ ಚಟುವಟಿಕೆ ಬಿರುಸುಗೊಂಡಿತ್ತು. ಹೀಗಾಗಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಆರಂಭಿಸಿತ್ತು.
ಕಬ್ಬಿನಾಲೆ ಅರಣ್ಯದಲ್ಲಿ ನಡೆದ ಎನ್ಕೌಂಟರ್ನೊಂದಿಗೆ ಉಡುಪಿ ಭಾಗದಲ್ಲಿ 13 ವರ್ಷಗಳ ನಂತರ ಗುಂಡಿನ ಮೊರತೆ ಕೇಳಿದಂತಾಗಿದೆ. ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಎನ್ಕೌಂಟರ್ನಲ್ಲಿ ವಿಕ್ರಂ ಗೌಡ ಹತನಾದರೆ, ಉಳಿದ ನಕ್ಸಲರು ಪರಾರಿಯಾಗಿದ್ದಾರೆ.
ನಕ್ಸಲರ ನೇತ್ರಾವತಿ ದಳದ ನಾಯಕ ವಿಕ್ರಂ ಗೌಡ. ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಪೀತೆಬೈಲ್ ಅರಣ್ಯ ಪ್ರದೇಶದ ಗ್ರಾಮದಲ್ಲಿ ನಡೆದ ಎನ್ಕೌಂಟರ್ನಲ್ಲಿ ಹತನಾಗಿದ್ದಾನೆ.