• About
  • Advertise
  • Privacy & Policy
  • Contact
Thursday, November 5, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Karnataka News

ಹಗರಿಬೊಮ್ಮನಹಳ್ಳಿ: ಮಹಿಳೆಯರ ಸಮಸ್ಯೆ ನಿರ್ಲಕ್ಷಿಸಿದ ಅಧಿಕಾರಿಗಳಿಗೆ ನಾಗಲಕ್ಷ್ಮಿ ಚೌಧರಿ ತರಾಟೆ!

Vijaya Sakshi News Desk by Vijaya Sakshi News Desk
November 5, 2026
in Karnataka News
ಹಗರಿಬೊಮ್ಮನಹಳ್ಳಿ: ಮಹಿಳೆಯರ ಸಮಸ್ಯೆ ನಿರ್ಲಕ್ಷಿಸಿದ ಅಧಿಕಾರಿಗಳಿಗೆ ನಾಗಲಕ್ಷ್ಮಿ ಚೌಧರಿ ತರಾಟೆ!
0
SHARES
176
VIEWS
Share on Facebook

ಹಗರಿಬೊಮ್ಮನಹಳ್ಳಿ: ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ವೈದ್ಯಕೀಯ ಸೇವೆಗಳನ್ನು ಪರಿಶೀಲಿಸಿದ ಅವರು, ಮಹಿಳೆಯರಿಂದ ಅಹವಾಲು ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಖಡಕ್ ಸೂಚನೆ ನೀಡಿದರು.

ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲು ಸ್ತ್ರೀರೋಗ ತಜ್ಞ ವೈದ್ಯರು 3ರಿಂದ 8 ಸಾವಿರ ರೂ.ವರೆಗೆ ಹಣ ಪಡೆಯುತ್ತಿದ್ದಾರೆ ಎಂದು ಸಾರ್ವಜನಿಕರು ಗಂಭೀರ ಆರೋಪ ಮಾಡಿದರು. ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರಿಗೆ ಸರ್ಕಾರಿ ಆಸ್ಪತ್ರೆಯೇ ಆಸರೆಯಾಗಿದ್ದು, ಉಚಿತವಾಗಿ ದೊರೆಯಬೇಕಾದ ವೈದ್ಯಕೀಯ ಸೇವೆಗಳಿಗೂ ಹಣ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಳಲು ತೋಡಿಕೊಂಡರು.

ಗಂಭೀರ ಆರೋಗ್ಯ ಸಮಸ್ಯೆಗಳಿಂದ ಬಳಲುವ ಮಹಿಳೆಯರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡದೆ, ಕೊಪ್ಪಳದ ಆಸ್ಪತ್ರೆಗೆ ಶಿಫಾರಸು ಪತ್ರ ನೀಡಿ ಕಳುಹಿಸಲಾಗುತ್ತಿದೆ ಎಂಬ ಆರೋಪವೂ ಕೇಳಿಬಂತು.

ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನಾಗಲಕ್ಷ್ಮಿ ಚೌಧರಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಸಮರ್ಪಕ ವೈದ್ಯಕೀಯ ಸೌಲಭ್ಯ ಕಲ್ಪಿಸುವುದು ಅಧಿಕಾರಿಗಳ ಜವಾಬ್ದಾರಿ. ರೋಗಿಗಳಿಗೆ ಅನಗತ್ಯ ತೊಂದರೆ ನೀಡದೆ ಗುಣಮಟ್ಟದ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಮಹಿಳಾ ಸ್ಪಂದನ ಸಭೆ ನಡೆಸದಿದ್ದಕ್ಕೆ ಗರಂ:

ನಂತರ ಪುರಸಭೆಗೆ ಸಂಬಂಧಿಸಿದ ಮಹಿಳೆಯರ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಪುರಸಭೆ ಮುಖ್ಯಾಧಿಕಾರಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಪ್ರತಿ ಶನಿವಾರ ಮಹಿಳಾ ಸ್ಪಂದನ ಸಭೆ ನಡೆಸುವಂತೆ ಸೂಚನೆ ನೀಡಿದ್ದರೂ ಈವರೆಗೆ ಏನು ಕ್ರಮ ಕೈಗೊಂಡಿದ್ದೀರಿ? ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲವೇ ಎಂದು ಪ್ರಶ್ನಿಸಿ ಅಧಿಕಾರಿಗಳ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿದರು.

ಮಹಿಳೆಯರ ಕುಂದುಕೊರತೆಗಳನ್ನು ಆಲಿಸುವುದು ಕೇವಲ ಸಭೆ ನಡೆಸುವ ಔಪಚಾರಿಕತೆಯಾಗಬಾರದು. ಅವರ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ಕಲ್ಪಿಸಬೇಕು. ಮಹಿಳೆಯರ ಆರೋಗ್ಯ, ಸುರಕ್ಷತೆ ಹಾಗೂ ಮೂಲಭೂತ ಸೌಲಭ್ಯಗಳ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷೆ ರೇಷ್ಮಾ, ಉಪಾಧ್ಯಕ್ಷೆ ನೇತ್ರಾವತಿ, ವಿವಿಧ ಮಹಿಳಾ ಸಂಘಟನೆಗಳ ಪ್ರತಿನಿಧಿಗಳು, ಜಿಲ್ಲಾ ಆರೋಗ್ಯಾಧಿಕಾರಿ ಲಿಂಗರಾಜು, ಡಿವೈಎಸ್ಪಿ ಮಲ್ಲೇಶ್ ನಾಯ್ಕ ದೊಡ್ಮನಿ, ಸಿಪಿಐ ವಿಕಾಸ್ ಲಂಬಾಣಿ, ಪಿಎಸ್ಐ ಸುಜಾತ, ತಾ.ಪಂ. ಮುಖ್ಯಾಧಿಕಾರಿ ವಿಶ್ವನಾಥ, ಪುರಸಭೆ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags: hagaribommanahallikannadanewsKarnatakakarnataka newsNagalakshmi ChaudharyVijayasakshivijayasakshinewsWomen's Issues
ShareSendShare
Previous Post

ಗದಗದಲ್ಲಿ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ, ದೇಶ್ ಬಚಾವೋ’ ಅಭಿಯಾನ; ಕೇಂದ್ರದ ವಿರುದ್ಧ ಪ್ರತಿಭಟನೆ

Next Post

ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು: ಪಾಟೀಲ ಎಚ್ಚರಿಕೆ

Vijaya Sakshi News Desk

Vijaya Sakshi News Desk

Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

Next Post
ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು: ಪಾಟೀಲ ಎಚ್ಚರಿಕೆ

ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು: ಪಾಟೀಲ ಎಚ್ಚರಿಕೆ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

ಲಕ್ಷ್ಮೇಶ್ವರ, ಶಿರಹಟ್ಟಿಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಪರಿಶೀಲನೆ

November 4, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ಶಾಲೆ, ಆಸ್ಪತ್ರೆ, ವಸತಿ ನಿಲಯಗಳಲ್ಲಿ ಅವ್ಯವಸ್ಥೆ; ಗದಗ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಅಸಮಾಧಾನ!

ಶಾಲೆ, ಆಸ್ಪತ್ರೆ, ವಸತಿ ನಿಲಯಗಳಲ್ಲಿ ಅವ್ಯವಸ್ಥೆ; ಗದಗ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಅಸಮಾಧಾನ!

November 5, 2026
ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು: ಪಾಟೀಲ ಎಚ್ಚರಿಕೆ

ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು: ಪಾಟೀಲ ಎಚ್ಚರಿಕೆ

November 5, 2026
ಹಗರಿಬೊಮ್ಮನಹಳ್ಳಿ: ಮಹಿಳೆಯರ ಸಮಸ್ಯೆ ನಿರ್ಲಕ್ಷಿಸಿದ ಅಧಿಕಾರಿಗಳಿಗೆ ನಾಗಲಕ್ಷ್ಮಿ ಚೌಧರಿ ತರಾಟೆ!

ಹಗರಿಬೊಮ್ಮನಹಳ್ಳಿ: ಮಹಿಳೆಯರ ಸಮಸ್ಯೆ ನಿರ್ಲಕ್ಷಿಸಿದ ಅಧಿಕಾರಿಗಳಿಗೆ ನಾಗಲಕ್ಷ್ಮಿ ಚೌಧರಿ ತರಾಟೆ!

November 5, 2026
ಗದಗದಲ್ಲಿ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ, ದೇಶ್ ಬಚಾವೋ’ ಅಭಿಯಾನ; ಕೇಂದ್ರದ ವಿರುದ್ಧ ಪ್ರತಿಭಟನೆ

ಗದಗದಲ್ಲಿ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ, ದೇಶ್ ಬಚಾವೋ’ ಅಭಿಯಾನ; ಕೇಂದ್ರದ ವಿರುದ್ಧ ಪ್ರತಿಭಟನೆ

November 5, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ಶಾಲೆ, ಆಸ್ಪತ್ರೆ, ವಸತಿ ನಿಲಯಗಳಲ್ಲಿ ಅವ್ಯವಸ್ಥೆ; ಗದಗ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಅಸಮಾಧಾನ!

ಶಾಲೆ, ಆಸ್ಪತ್ರೆ, ವಸತಿ ನಿಲಯಗಳಲ್ಲಿ ಅವ್ಯವಸ್ಥೆ; ಗದಗ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರ ಅಸಮಾಧಾನ!

November 5, 2026
ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು: ಪಾಟೀಲ ಎಚ್ಚರಿಕೆ

ಅನ್ನಭಾಗ್ಯ ಅಕ್ಕಿ ಮಾರಿದರೆ ರೇಷನ್ ಕಾರ್ಡ್ ರದ್ದು: ಪಾಟೀಲ ಎಚ್ಚರಿಕೆ

November 5, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper