ವಿಜಯಸಾಕ್ಷಿ ಸುದ್ದಿ, ಧಾರವಾಡ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿಯಲ್ಲಿ ಬರುವ ಡಾ. ಎಂ.ಎಂ. ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ಧಾರವಾಡ ಹಾಗೂ ಧಾರವಾಡದ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಐ.ಕ್ಯೂ.ಎ.ಸಿ ಸಂಯುಕ್ತಾಶ್ರಯದಲ್ಲಿ ಹಾಗೂ ಕನ್ನಡ ವಿಭಾಗದ ನೇತೃತ್ವದಲ್ಲಿ ಮಾರ್ಚ್ 27ರಂದು ‘ಹಳೆಗನ್ನಡ ಓದು’ ಪದವಿ ಪಠ್ಯಾಧಾರಿತ ರಾಷ್ಟ್ರಮಟ್ಟದ ಕಾರ್ಯಾಗಾರವನ್ನು ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಏರ್ಪಡಿಸಲಾಗಿದೆ.
ವಿಶ್ರಾಂತ ಪ್ರಾಧ್ಯಾಪಕರಾದ ಡಾ. ಶಾಂತಿನಾಥ ದಿಬ್ಬದ ಮತ್ತು ಪ್ರತಿಷ್ಠಾನದ ಸದಸ್ಯರಾದ ಹನುಮಾಕ್ಷಿ ಗೋಗಿ ಅವರು ‘ಹಳೆಗನ್ನಡ ಓದು’ ಪದವಿ ಪಠ್ಯಾಧಾರಿತ ರಾಷ್ಟ್ರಮಟ್ಟದ ಕಾರ್ಯಾಗಾರದಲ್ಲಿ ಪ್ರಬಂಧವನ್ನು ಮಂಡಿಸುವರು. ಹುಬ್ಬಳ್ಳಿ-ಧಾರವಾಡ(ಪಶ್ಚಿಮ) ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಅರವಿಂದ ಚಂದ್ರಕಾಂತ ಬೆಲ್ಲದ ಕಾರ್ಯಕ್ರಮವನ್ನು ಉದ್ಘಾಟಿಸುವರು. ಪ್ರತಿಷ್ಠಾನದ ಸದಸ್ಯರಾದ ಶಶಿಧರ ತೋಡಕರ ಪ್ರಾಸ್ತಾವಿಕ ನುಡಿಗಳನ್ನಾಡುವರು. ಅಧ್ಯಕ್ಷತೆಯನ್ನು ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯರಾದ ಡಾ. ಎಸ್.ಎಸ್. ಅಂಗಡಿ ವಹಿಸಿಕೊಳ್ಳಲಿದ್ದಾರೆ. ಐ.ಕ್ಯೂ.ಎ.ಸಿ ಸಂಚಾಲಕರಾದ ವ್ಯಾಪಾರಿ ಮಧುಸೂಧನ ಕೆ. ಉಪಸ್ಥಿತರಿರುವರು.
ಸಂಶೋಧಕರು, ಸಾಹಿತಿಗಳು, ಗಣ್ಯರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಪ್ರಕಟಣೆ ತಿಳಿಸಿದೆ.