ಅರೆನಗ್ನ ನೃತ್ಯ: ಬೆಂಗಳೂರಿನ 17 ಕ್ಕೂ ಹೆಚ್ಚು ಡ್ಯಾನ್ಸ್ ಬಾರ್​ಗಳ ಮೇಲೆ ಖಾಕಿ ದಾಳಿ!

0
Spread the love

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ 17 ಕ್ಕೂ ಹೆಚ್ಚು ಡ್ಯಾನ್ಸ್ ಬಾರ್​ಗಳ ಮೇಲೆ ಇಂದು ಪೊಲೀಸರು ದಿಢೀರ್ ದಾಳಿ ನಡೆಸಿ ಪರಿಶೀಲಿಸಿದರು. ಅವಧಿ ಮೀರಿ ಕಾರ್ಯಾಚರಿಸುತ್ತಿರುವುದು, ಯುವತಿಯರಿಂದ ಅಶ್ಲೀಲ ನೃತ್ಯ ಮಾಡಿಸುತ್ತಿರುವುದೂ ಸೇರಿದಂತೆ ಹಲವು ನಿಯಮಗಳ ಉಲ್ಲಂಘನೆ ಆರೋಪದ ಕಾರಣ ದಾಳಿ ನಡೆದಿದೆ.

Advertisement

ಬೆಂಗಳೂರು ಕೇಂದ್ರ ವಿಭಾಗ ಹಾಗೂ ಪಶ್ಚಿಮ ವಿಭಾಗದ ಡ್ಯಾನ್ಸ್ ಬಾರ್​ಗಳ ಮೇಲೂ ದಾಳಿ ನಡೆದಿದೆ. ಕಬ್ಬನ್ ಪಾರ್ಕ್, ಅಶೋಕ್ ನಗರ, ಎಸ್.ಜೆ.ಪಾರ್ಕ್, ಉಪ್ಪಾರಪೇಟೆ ಸೇರಿ ನಗರದ ವಿವಿಧ ಠಾಣಾ ವ್ಯಾಪ್ತಿಗಳ ಬಾರ್​ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಇದೇ ವೇಳೆ ನಿಯಮ ಉಲ್ಲಂಘಿಸಿದ ಬಾರ್​ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.


Spread the love

LEAVE A REPLY

Please enter your comment!
Please enter your name here