ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ: ಜಾಮೀನು ಸಿಕ್ಕ ಬೆನ್ನಲ್ಲೇ ಆರೋಪಿಗಳ ಭರ್ಜರಿ ರೋಡ್ ಶೋ!

0
Spread the love

ಹಾವೇರಿ:- ಇಲ್ಲಿನ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಜಾಮೀನು ಸಿಗುತ್ತಿದ್ದಂತೆ ಆರೋಪಿಗಳು ಭರ್ಜರಿ ರೋಡ್ ಶೋ ನಡೆಸಿದ್ದಾರೆ.

Advertisement

ಹಾನಗಲ್ ತಾಲೂಕಿನ ಅಕ್ಕಿ ಆಲೂರು ಪಟ್ಟಣದಲ್ಲಿ ಈ ಘಟನೆ ಜರುಗಿದೆ. ಕಳೆದ 3 ದಿನಗಳ ಹಿಂದೆ ಹಾವೇರಿ ಸಬ್ ಜೈಲಿನಿಂದ ಅಕ್ಕಿ ಆಲೂರಿನವರೆಗೆ ಆರೋಪಿಗಳು ರೋಡ್ ಶೋ ನಡೆಸಿದ್ದಾರೆ. 5 ಕಾರುಗಳಲ್ಲಿ 20ಕ್ಕೂ ಹೆಚ್ಚು ಹಿಂಬಾಲಕರ ಜೊತೆ ಅಕ್ಕಿ ಆಲೂರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿರೋ ವೀಡಿಯೋಗಳು ವೈರಲ್ ಆಗಿದೆ.

ಕಳೆದ 3 ದಿನಗಳ ಹಿಂದೆ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ 7 ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಹಾವೇರಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದ್ದು, ಸಂತ್ರಸ್ತೆ ಆರೋಪಿಗಳನ್ನು ಗುರುತಿಸಲು ವಿಫಲವಾದ ಹಿನ್ನಲೆ ಪ್ರಕರಣದ ಪ್ರಮುಖ 7 ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ಮಂಜೂರಾಗಿದೆ.


Spread the love

LEAVE A REPLY

Please enter your comment!
Please enter your name here