ವಿಜಯಸಾಕ್ಷಿ ಸುದ್ದಿ, ಗದಗ : ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಹಾಡುಹಗಲೇ ಕಾಲೇಜ್ ಕ್ಯಾಂಪಸ್‌ನಲ್ಲಿ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಫಯಾಜ್‌ಗೆ ಕೂಡಲೇ ಗಲ್ಲು ಶಿಕ್ಷೆ ವಿಧಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ಗದಗ ಯುವ ಮುಖಂಡ ನಿಂಗನಗೌಡ ಮಾಲಿಪಾಟೀಲ ಸರ್ಕಾರವನ್ನು ಆಗ್ರಹಿಸಿದ್ದಾರೆ.
Advertisement
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಕೊಲೆಗಳು, ದರೋಡೆಗಳು, ಹಲ್ಲೆಗಳಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿದೆ. ರಾಜ್ಯದಲ್ಲಿ ಮತ್ತೆ ಇಂತಹ ದುರ್ಘಟನೆ ಆಗದಂತೆ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.