HomeCrime Newsನೇಹಾ ಹಿರೇಮಠ ಹಂತಕನಿಗೆ ಗಲ್ಲು ಶಿಕ್ಷೆ ವಿಧಿಸಿ : ನಿಂಗನಗೌಡ

ನೇಹಾ ಹಿರೇಮಠ ಹಂತಕನಿಗೆ ಗಲ್ಲು ಶಿಕ್ಷೆ ವಿಧಿಸಿ : ನಿಂಗನಗೌಡ

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಹಾಡುಹಗಲೇ ಕಾಲೇಜ್ ಕ್ಯಾಂಪಸ್‌ನಲ್ಲಿ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಫಯಾಜ್‌ಗೆ ಕೂಡಲೇ ಗಲ್ಲು ಶಿಕ್ಷೆ ವಿಧಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ಗದಗ ಯುವ ಮುಖಂಡ ನಿಂಗನಗೌಡ ಮಾಲಿಪಾಟೀಲ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಕೊಲೆಗಳು, ದರೋಡೆಗಳು, ಹಲ್ಲೆಗಳಂತಹ ಘಟನೆಗಳು ನಿರಂತರವಾಗಿ ನಡೆಯುತ್ತಿದೆ. ರಾಜ್ಯದಲ್ಲಿ ಮತ್ತೆ ಇಂತಹ ದುರ್ಘಟನೆ ಆಗದಂತೆ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!