ಚಾಮರಾಜನಗರ: ಕಾವೇರಿ ವನ್ಯಧಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟ ಪ್ರಕರಣ ಖಂಡಿಸಿ ಹನೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಕೊನೆಗೂ ಅಂತ್ಯಗೊಂಡಿದೆ.
ಮೃತರ ಕುಟುಂಬಗಳಿಗೆ ₹15 ಲಕ್ಷ ಪರಿಹಾರ ಹಾಗೂ ಸರ್ಕಾರಿ ಉದ್ಯೋಗದ ಭರವಸೆ ನೀಡಿದ ಬಳಿಕ ಪ್ರತಿಭಟನಾಕಾರರು ಹೋರಾಟ ಕೈಬಿಟ್ಟಿದ್ದಾರೆ.



