HomeKarnataka Newsಹನೂರು ಅರಣ್ಯ ಶೂಟೌಟ್ ಪ್ರಕರಣ: ಸರ್ಕಾರ ಸತ್ಯ ಮರೆಮಾಚುತ್ತಿದೆ - ಬಿ.ವೈ. ವಿಜಯೇಂದ್ರ ಆರೋಪ

ಹನೂರು ಅರಣ್ಯ ಶೂಟೌಟ್ ಪ್ರಕರಣ: ಸರ್ಕಾರ ಸತ್ಯ ಮರೆಮಾಚುತ್ತಿದೆ – ಬಿ.ವೈ. ವಿಜಯೇಂದ್ರ ಆರೋಪ

For Dai;y Updates Join Our whatsapp Group

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ವ್ಯಾಪ್ತಿಯಲ್ಲಿ ನಡೆದಿರುವ ಅರಣ್ಯ ಶೂಟೌಟ್ ಪ್ರಕರಣದ ಸತ್ಯಾಂಶವನ್ನು ರಾಜ್ಯ ಸರ್ಕಾರ ಮರೆಮಾಚುವ ಪ್ರಯತ್ನ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, ಪ್ರಕರಣದ ಸತ್ಯಾಂಶವನ್ನು ತಿಳಿದುಕೊಳ್ಳುವ ಉದ್ದೇಶದಿಂದ ಬಿಜೆಪಿ ವತಿಯಿಂದ ಈಗಾಗಲೇ ಸತ್ಯಶೋಧನಾ ಸಮಿತಿ ರಚಿಸಲಾಗಿತ್ತು. ಸಮಿತಿ ಸ್ಥಳಕ್ಕೆ ತೆರಳಿ ಮಾಹಿತಿ ಸಂಗ್ರಹಿಸಿದ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಗಂಭೀರ ಪ್ರಶ್ನೆಗಳು ಮತ್ತು ಅನುಮಾನಗಳು ಮೂಡಿವೆ ಎಂದು ಹೇಳಿದ್ದಾರೆ.

ಹನೂರು ಪ್ರಕರಣದಲ್ಲಿ ಮೃತದೇಹಗಳನ್ನು ಆತುರಾತುರವಾಗಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆದರೆ ಇದುವರೆಗೆ ಮರಣೋತ್ತರ ಪರೀಕ್ಷೆಯ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿಲ್ಲ. ವರದಿ ಏಕೆ ಬಿಡುಗಡೆ ಮಾಡುತ್ತಿಲ್ಲ ಎಂಬುದಕ್ಕೆ ಸರ್ಕಾರ ಉತ್ತರ ನೀಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿಯನ್ನು ಮುಚ್ಚಿಡುವ ಅಗತ್ಯವೇನು? ವರದಿಯಲ್ಲಿ ಏನಿದೆ ಎಂಬುದನ್ನು ಜನರಿಗೆ ತಿಳಿಸಬೇಕಲ್ಲವೇ? ವರದಿಯನ್ನು ಬಿಡುಗಡೆ ಮಾಡದಿರುವುದೇ ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಘಟನೆಯ ಕೆಲವು ಫೋಟೋಗಳನ್ನು ಪ್ರದರ್ಶಿಸಿದ ವಿಜಯೇಂದ್ರ, ಮೃತ ವ್ಯಕ್ತಿಯ ಭುಜದ ಭಾಗಕ್ಕೆ ಗನ್‌ ಇಟ್ಟು ಅತ್ಯಂತ ಸಮೀಪದಿಂದ ಗುಂಡು ಹಾರಿಸಿರುವಂತೆ ಫೋಟೋಗಳಲ್ಲಿ ಕಾಣಿಸುತ್ತಿದೆ ಎಂದು ಆರೋಪಿಸಿದರು.

ತಜ್ಞರ ಅಭಿಪ್ರಾಯದ ಪ್ರಕಾರ ಇದು ದೂರದಿಂದ ಅಥವಾ ಲಾಂಗ್‌ ರೇಂಜ್‌ನಿಂದ ಗುಂಡು ಹಾರಿಸಿದ ಪ್ರಕರಣದಂತೆ ಕಾಣುತ್ತಿಲ್ಲ. ಸಮೀಪದಿಂದ ಗುಂಡು ಹಾರಿಸಿರುವ ಸಾಧ್ಯತೆಯಿದೆ ಎಂದು ವಿಜಯೇಂದ್ರ ಹೇಳಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಕೂಡ ಈ ಅಂಶವನ್ನು ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂಬ ಮಾಹಿತಿ ಇದೆ ಎಂದು ಅವರು ತಿಳಿಸಿದ್ದಾರೆ.

ಹಾಗಿದ್ದರೆ ಮರಣೋತ್ತರ ಪರೀಕ್ಷೆಯ ವರದಿಯನ್ನು ಸರ್ಕಾರ ಏಕೆ ಬಹಿರಂಗಪಡಿಸುತ್ತಿಲ್ಲ? ಎಂದು ಪ್ರಶ್ನಿಸಿದ ಅವರು, ಈ ಎಲ್ಲಾ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಿದಾಗ ಇದು ಸಾಮಾನ್ಯ ಎನ್‌ಕೌಂಟರ್‌ ಪ್ರಕರಣವೇ ಅಥವಾ ಇದರ ಹಿಂದೆ ಬೇರೆ ಯಾವುದಾದರೂ ಕಾರಣವಿದೆಯೇ ಎಂಬ ಅನುಮಾನ ಮೂಡುತ್ತಿದೆ ಎಂದು ಹೇಳಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img