HomeKarnataka Newsಡಿಕೆಶಿ ಕುಟುಂಬಕ್ಕೆ ಸಂತಸದ ಸುದ್ದಿ: ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನನ!

ಡಿಕೆಶಿ ಕುಟುಂಬಕ್ಕೆ ಸಂತಸದ ಸುದ್ದಿ: ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನನ!

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕುಟುಂಬದಲ್ಲಿ ಸಂತಸದ ಕ್ಷಣಗಳು ಮನೆಮಾಡಿವೆ. ಅವರ ಪುತ್ರಿ ಐಶ್ವರ್ಯ ಹೆಗ್ಡೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆ ಆಗಿದ್ದು,, ಮೊಮ್ಮಗಳನ್ನು ನೋಡಲು ಡಿಕೆ ಶಿವಕುಮಾರ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.

ಐಶ್ವರ್ಯ ಹೆಗ್ಡೆ ಅವರು ಅಮರ್ತ್ಯ ಹೆಗ್ಡೆ ಅವರನ್ನು 2021ರ ಫೆಬ್ರವರಿ 14ರಂದು ವಿವಾಹವಾಗಿದ್ದರು. ಅಮರ್ತ್ಯ ಹೆಗ್ಡೆ ಅವರು ವಿ.ಜಿ. ಸಿದ್ಧಾರ್ಥ ಅವರ ಪುತ್ರರಾಗಿದ್ದಾರೆ.

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಶೆರಟಾನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಆಗಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ನವಜೋಡಿಗೆ ಶುಭಹಾರೈಸಿದ್ದರು.

ಇದೀಗ ಕುಟುಂಬದಲ್ಲಿ ಹೊಸ ಸದಸ್ಯೆಯ ಆಗಮನದಿಂದ ಸಂತಸದ ವಾತಾವರಣ ನಿರ್ಮಾಣವಾಗಿದ್ದು, ಬಂಧುಗಳು ಹಾಗೂ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!