ವಿಜಯಸಾಕ್ಷಿ ಸುದ್ದಿ, ಗದಗ: ಭಾರತೀಯ ಜನತಾ ಪಾರ್ಟಿ ವತಿಯಿಂದ ಆಗಸ್ಟ್ 9ರ ಮಧ್ಯಾಹ್ನ 12.30 ಗಂಟೆಗೆ ಗದಗ, ಧಾರವಾಡ, ಹಾವೇರಿ ವಿಭಾಗ ಮಟ್ಟದ ಹರ್ ಘರ್ ತಿರಂಗಾ ಯಾತ್ರೆ ಕಾರ್ಯಕ್ರಮವು ನರಗುಂದದಲ್ಲಿ ಜರುಗಲಿದೆ.
ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಂಸದರು, ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಶಾಸಕರು, ಮಾಜಿ ಸಚಿವರಾದ ಸಿ.ಸಿ. ಪಾಟೀಲ, ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ, ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ವಿಧಾನ ಪರಿಷತ್ ಸದಸ್ಯರಾದ ಎಸ್.ವ್ಹಿ. ಸಂಕನೂರ, ಶಾಸಕರಾದ ಮಹೇಶ ಟೆಂಗಿನಕಾಯಿ, ಡಾ. ಚಂದ್ರು ಲಮಾಣಿ, ಎಂ.ಆರ್. ಪಾಟೀಲ, ಮಾಜಿ ಸಚಿವರಾದ ಕಳಕಪ್ಪ ಬಂಡಿ, ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಕೌತಾಳ, ವಿಭಾಗದ ಹಾಲಿ ಹಾಗೂ ಮಾಜಿ ಶಾಸಕರು, ಸಚಿವರು, ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿರುವರು ಎಂದು ಅಭಿಯಾನದ ಜಿಲ್ಲಾ ಸಂಚಾಲಕ ಆರ್.ಕೆ. ಚವ್ಹಾಣ, ಸಹ-ಸಂಚಾಲಕ ರಾಘವೇಂದ್ರ ಯಳವತ್ತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.