ಬೆಂಗಳೂರು: ಪಿಜಿಯಲ್ಲಿ ಬಿಬಿಎ ದ್ವಿತೀಯ ವರ್ಷದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಾಗಲೂರಿನಲ್ಲಿ ನಡೆದಿದೆ. ಸನಾ ಪರ್ವಿನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದು, ಈಕೆ ಬಾಗಲೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದಳು. ಕಾಲೇಜಿನ ಪಿಜಿಯಲ್ಲಿ ನೇಣಿಗೆ ಶರಣಾಗಿದ್ದಾಳೆ.
ಸಹ ವಿದ್ಯಾರ್ಥಿ ಪ್ರೀತಿಸುವಂತೆ ಈಕೆಗೆ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ. ಅದೇ ಕಾಲೇಜಿನಲ್ಲಿ ಓದುತ್ತಿದ್ದ ಸೀನಿಯರ್ ವಿದ್ಯಾರ್ಥಿಯಿಂದ ಕಿರುಕುಳ ಇತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ಸನಾ ಪರ್ವಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಆರೋಪ ಕೇಳಿಬಂದಿದೆ. ಈ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.










