ಶಿವಮೊಗ್ಗ: ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲೇ ಹೆಡ್ ಕಾನ್ಸ್ಟೇಬಲೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವವರನ್ನು ಮಹಮ್ಮದ್ ಜಕ್ರೀಯಾ (55) ಎಂದು ಗುರುತಿಸಲಾಗಿದೆ. ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಒಂದು ತಿಂಗಳ ರಜೆಯಲ್ಲಿದ್ದ ಜಕ್ರೀಯಾ, ಎರಡು ದಿನಗಳ ಹಿಂದಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು. ಸಹ ಸಿಬ್ಬಂದಿ ನಾಸೀರ್ ಅಹಮ್ಮದ್ ನಿರಂತರವಾಗಿ ಕಿಂಡಲ್ ಮಾಡುತ್ತಿದ್ದಾನೆ ಎಂದು ಡೆತ್ ನೋಟ್ನಲ್ಲಿ ಉಲ್ಲೇಖಿಸಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಈ ಘಟನೆ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪಶ್ಚಿಮ ಸಂಚಾರ ಪೊಲೀಸ್ ಠಾಣೆಗೆ ಎಸ್ಪಿ ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.



