ಕಲಬುರ್ಗಿ:- ಪ್ರೀತಿಸುವಂತೆ ಕಿರುಕುಳ ಕೊಡುತ್ತಿದ್ದ ಮುಸ್ಲಿಂ ಯುವಕನ ಟಾರ್ಚರ್ ನಿಂದ ಮನನೊಂದು ಅಪ್ರಾಪ್ತ ಬಾಲಕಿ ಸೂಸೈಡ್ ಮಾಡಿಕೊಂಡ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.
ಘಟನೆಗೆ ಸಂಬಂಧಿಸಿದಂತೆ ಪಾಗಲ್ ಪ್ರೇಮಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. 14 ವರ್ಷದ ಬಾಲಕಿಗೆ ಕಳೆದ ಹಲವು ದಿನಗಳಿಂದ ಆಟೋ ಚಾಲಕ ಮೆಹಬೂಬ್ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ, ಆತನ ಕಿರುಕುಳ ತಾಳಲಾರದೇ ನೇಣುಬಿಗಿದುಕೊಂಡು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನೂ ಆರೋಪಿ ಮೆಹಬೂಬ್, ನನ್ನು ಪೋಲಿಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಇನ್ನೂ ಬಾಲಕಿ ಸಾವಿಗೆ ನ್ಯಾಯ ಸಿಗಬೇಕು ಎಂದು ಘಟನೆಯನ್ನು ಖಂಡಿಸಿ ಜೇವರ್ಗಿ ಪಟ್ಟಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದಿಂದ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಗಿದ್ದು, ಆರೋಪಿಯನ್ನು ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹ ಮಾಡಿದ್ದು, ಈ ಕುರಿತು ಜೇವರ್ಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.