ಮುಡಾ ಹಗರಣ ಬಯಲಿಗೆಳೆದ RTI ಕಾರ್ಯಕರ್ತರಿಗೆ ಕಿರುಕುಳ: ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ!

0
Spread the love

ಬೆಂಗಳೂರು:- ಮುಡಾ ಹಗರಣವನ್ನು ಬಯಲಿಗೆಳೆದ ಆರ್‌ಟಿಐ ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವರಾದ ಎಚ್‌ಡಿ ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ.

Advertisement

ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಹಗರಣಗಳನ್ನು ಪ್ರಶ್ನಿಸಿದ ಪ್ರತಿಪಕ್ಷಗಳನ್ನು ವಿಧಾನಮಂಡಲದಲ್ಲಿ ಹತ್ತಿಕ್ಕಲಾಯಿತು! ಸತ್ಯಶೋಧನೆಯಲ್ಲಿ ನಿರತರಾದ RTI ಕಾರ್ಯಕರ್ತರನ್ನು ಅಧಿಕಾರ ದುರ್ಬಳಕೆ ಮಾಡಿಕೊಂಡು ದಮನ ಮಾಡಲಾಗುತ್ತಿದೆ!! ಎಂದು ಹರಿಹಾಯ್ದಿದ್ದಾರೆ.

ಮುಖ್ಯಮಂತ್ರಿಗಳ ಕುಟುಂಬ ಮೈಸೂರಿನ ಮೂಡಾದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ RTI ಕಾರ್ಯಕರ್ತರನ್ನು ಕಾಂಗ್ರೆಸ್ ಗುರಿ ಮಾಡಿಕೊಂಡಿದೆ. ಆರೋಪಿತ ಸ್ಥಾನದಲ್ಲಿರುವ ಸಿಎಂ ಪರಿವಾರವನ್ನು ರಕ್ಷಿಸುವ ಏಕೈಕ ದುರುದ್ದೇಶದಿಂದ ಕಾಂಗ್ರೆಸ್ಸಿಗರು RTI ಕಾರ್ಯಕರ್ತರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಕುಂಬಳಕಾಯಿ ಕಳ್ಳ ಹೆಗಲು ಮುಟ್ಟಿ ನೋಡಿಕೊಂಡ ಎಂಬಂತಿದೆ ಈ ನಾಟಕ ಎಂದು ಕೇಂದ್ರ ಸಚಿವರು ಟೀಕಾ ಪ್ರಹಾರ ನಡೆಸಿದ್ದಾರೆ.

ಪೊಲೀಸ್ ಬಲ ಬಳಸಿ ಸತ್ಯದ ಕತ್ತು ಹಿಚುಕಲು ಸಾಧ್ಯವೇ ಇಲ್ಲ. ಹಾದಿಬೀದಿಯಲ್ಲಿ ಜನರ ಕೈಗೆ ಸಿಕ್ಕಿರುವ ದಾಖಲೆಗಳೇ ಮೂಡಾ ಹಗರಣದ ‘ಅಸಲಿ ಕೈ’ ಯಾವುದು ಎನ್ನುವುದನ್ನು ಸ್ಪಷ್ಟವಾಗಿ ಹೇಳುತ್ತಿವೆ. ಹಾಗಿದ್ದ ಮೇಲೆ ಸತ್ಯವನ್ನು ಹೆಕ್ಕಿ ತೆಗೆದ RTI ಕಾರ್ಯಕರ್ತರ ಮೇಲೆ ಸೇಡಿನ ರಾಜಕಾರಣ ಮಾಡುತ್ತಿದೆ ಎಂದರು.


Spread the love

LEAVE A REPLY

Please enter your comment!
Please enter your name here