ಉಡುಪಿ:- ಇಲ್ಲಿನ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಖಾಕಿ ವಶದಲ್ಲಿದ್ದ ಆರೋಪಿ ಸಾವನ್ನಪ್ಪಿದ ಘಟನೆ ಜರುಗಿದೆ.
Advertisement
ಮಹಿಳೆ ಮತ್ತು ಮಕ್ಕಳಿಗೆ ಕಿರುಕುಳ ನೀಡಿದ ಆರೋಪದಲ್ಲಿ ಪೊಲೀಸ್ ವಶದಲ್ಲಿದ್ದ ವ್ಯಕ್ತಿಯೊಬ್ಬರು ಠಾಣೆಯಲ್ಲೇ ಸಾವಿಗೀಡಾಗಿದ್ದಾನೆ.
ಕೇರಳದ ಬಿಜು ಮೋಹನ್ ಮಹಿಳೆ ಮತ್ತು ಮಕ್ಕಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ. ಠಾಣೆಗೆ ಕರೆಸಿ ಪ್ರಾಥಮಿಕ ತನಿಖೆ ನಡೆಸಿದ ಬ್ರಹ್ಮಾವರ ಪೊಲೀಸರು, ಲಾಕಪ್‌ನಲ್ಲಿ ಇರಿಸಿದ್ದರು.
ಮುಂಜಾನೆ ಕುಸಿದು ಬಿದ್ದ ಸ್ಥಿತಿಯಲ್ಲಿದ್ದ ಆತನನ್ನು ಪೊಲೀಸರೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಚಿಕಿತ್ಸೆ ನೀಡುವ ಮೊದಲೇ ಆತ ಕೊನೆಯುಸಿರೆಳೆದಿದ್ದ. ಲಾಕಪ್ ಡೆತ್ ಪ್ರಕರಣ ಪೊಲೀಸರಿಗೆ ತಲೆನೋವು ತಂದಿದೆ.