ಬೆಂಗಳೂರು: ಸಾಮಾನ್ಯವಾಗಿ ಪುಟ್ಟ ಮಕ್ಕಳಿಂದ ಹಿಡಿದು ಎಲ್ಲರಿಗೂ ಕರಿದ ಹಸಿರು ಬಟಾಣಿ ಅಂದ್ರೆ ಎಲ್ಲಿಲ್ಲದ ಇಷ್ಟ. ಅದರಲ್ಲೂ ಮದ್ಯಪ್ರಿಯರಿಗೆ ಅಂತೂ ಸ್ನಾಕ್ಸ್ ರೂಪದಲ್ಲಿ ಹಲವು ತಿಂಡಿ ತಿನಿಸುಗಳು ಬೇಕಾಗುತ್ತವೆ. ಅದರಲ್ಲಿ ಕರಿದ ಹಸಿರು ಬಟಾಣಿ ಕೂಡ ಒಂದು. ಆದರೆ ಇದೀಗ ಈ ಒಂದು ಕರಿದ ಹಸಿರು ಬಟಾಣಿಯಲ್ಲಿ ಅಪಾಯಕಾರಿ ಕೃತಕ ಬಣ್ಣ ಪತ್ತೆಯಾಗಿದೆ. ಹೌದು
ಬೆಂಗಳೂರಿನ ವಿವಿಧ ಭಾಗದಲ್ಲಿನ ಸುಮಾರು 36 ಮಾದರಿಯ ಹಸಿರು ಬಟಾಣಿ ಮಾದರಿಗಳನ್ನು ಪಡೆದಿದ್ದ ಆಹಾರ ಇಲಾಖೆ ಅವುಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿತ್ತು. ಇದೀಗ ಪ್ರಯೋಗಾಲಯ ವರದಿ ಬಂದಿದ್ದು, 28 ಕ್ಕೂ ಹೆಚ್ಚು ಹಸಿರು ಬಟಾಣಿ ಮಾದರಿಗಳು ಅಸುರಕ್ಷಿತ ಎಂಬ ವಿಚಾರ ತಿಳಿದುಬಂದಿದೆ.
ಬಟಾಣಿಯ ಬಣ್ಣ ಕಿಡ್ನಿಯ ಮೇಲೆ ಪರಿಣಾಮ ಬೀರಲಿದೆ ಎಂದು ವರದಿಯಲ್ಲಿ ಬಹಿರಂಗಗೊಂಡಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಹಾಗೂ ಆಹಾರ ಸುರಕ್ಷತಾ ಇಲಾಖೆ ಕೃತಕ ಬಣ್ಣ ಬಳಸಿ ಬಟಾಣಿ ಮಾರಟ ಮಾಡುವ ವ್ಯಾಪಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ.