ನವದೆಹಲಿ: ಹರ್ಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತ ಎಣಿಕೆ ನಡೆಯುತ್ತಿದೆ. ಆದರೆ ಹರ್ಯಾಣ ಚುನಾವಣೆಯ ಟ್ರೆಂಡ್‌ಗಳಲ್ಲಿ ದೊಡ್ಡ ತಿರುವು ಕಂಡುಬರುತ್ತಿದ್ದು, ಎಕ್ಸಿಟ್ ಪೋಲ್ ಭವಿಷ್ಯ ಉಲ್ಟಾ ಪಲ್ಟಾ ಆಗೋದು ಬಹುತೇಕ ಖಚಿತವಾಗಿದೆ. ಹರ್ಯಾಣ ಚುನಾವಣೆಯಲ್ಲಿ ಜೂಲಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಕುಸ್ತಿ ಪಟು ವಿನೇಶ್ ಫೋಗಟ್ 5 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದಾರೆ.
Advertisement
ಬಿಜೆಪಿ ಅಭ್ಯರ್ಥಿ ಯೋಗೇಶ್ ಕುಮಾರ್ ಮತ್ತು ವಿನೇಶ್ ಫೋಗಟ್ ಮಧ್ಯೆ ನೇರಾನೇರಾ ಪೈಪೋಟಿ ಇತ್ತು. ಆರಂಭದ ಮತ ಎಣಿಕೆಯಲ್ಲಿ ವಿನೇಶ್ ಫೋಗಟ್ ಅವರಿಗೆ ಮುನ್ನಡೆ ಸಿಕ್ಕಿದರೆ ನಂತರ ಯೋಗೇಶ್ ಕುಮಾರ್ ಅವರಿಗೆ ಮುನ್ನಡೆ ಸಿಕ್ಕಿತ್ತು. ಅಂತಿಮ ಸುತ್ತುಗಳ ಮತ ಎಣಿಕೆಯಲ್ಲಿ ಕಾಂಗ್ರೆಸ್ ಹೆಚ್ಚು ಮತಗಳು ಬಿದ್ದ ಪರಿಣಾಮ ವಿನೇಶ್ ಫೋಗಟ್ ಮೊದಲ ಚುನಾವಣೆಯಲ್ಲಿ ಗೆದ್ದು ವಿಧಾನಸಭೆ ಪ್ರವೇಶಿಸಿದ್ದಾರೆ.