ಹಾಸನಾಂಬೆ ಉತ್ಸವ: ಅ 9ರಿಂದ 23ರವರೆಗೆ ದೇವಿ ದರ್ಶನ ನಿಯಮದಲ್ಲಿ ಬದಲಾವಣೆ!

0
Spread the love

ಹಾಸನ:- ಅಕ್ಟೋಬರ್ 9ರಿಂದ 23ರವರೆಗೆ ಹಾಸನಾಂಬೆ ಉತ್ಸವ ಜರುಗಲಿದೆ. ಮೊದಲ ಹಾಗೂ ಕೊನೆಯ ದಿನ ಹೊರತುಪಡಿಸಿ ಉಳಿದ 13 ದಿನ ಭಕ್ತರಿಗೆ ಹಾಸನಾಂಬೆ ದರುಶನ ಕರುಣಿಸಲಿದ್ದಾಳೆ. ಹೀಗಾಗಿ ಹಾಸನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ನೇತೃತ್ವದಲ್ಲಿ ದರ್ಶನೋತ್ಸವ ಸಿದ್ಧತೆ ಸಭೆ ನಡೆಯಿತು.

Advertisement

ಸಭೆಯಲ್ಲಿ ಮಾತನಾಡಿದ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ, ರಾಜ್ಯದ ಮೂಲೆ ಮೂಲೆಯಿಂದ ಜನರು ಹಾಸನಾಂಬೆ ದರ್ಶನಕ್ಕೆ ಬರುತ್ತಾರೆ. ಆದರೆ ವಿವಿಐಪಿ, ವಿಐಪಿ ಭಕ್ತರ ಕಾರಣದಿಂದ ಜನರಿಗೆ ದರ್ಶನಕ್ಕೆ ಸಮಸ್ಯೆ ಆಗುತ್ತದೆ. ಅವರನ್ನು ಗಂಟೆಗಟ್ಟಲೇ ನಿಲ್ಲಿಸಿ ಜನರಿಗೆ ತೊಂದರೆ ಕೊಡುವುದು ಸರಿಯಲ್ಲ. ಹಾಗಾಗಿ ಈ ಗಣ್ಯ ಸಂಸ್ಕೃತಿ ತಡೆಯಲು ಸಹಕರಿಸಿ ಎಂದು ಮನವಿ ಮಾಡಿದರು.

ನಾನು ಈ ವಿಐಪಿ ಹಾಗೂ ಶಿಷ್ಟಾಚಾರ ಭಕ್ತರಿಗೆ ಸಮಯ ನಿಗದಿ ಮಾಡಿ ಎಂದು ಹೇಳಿದ್ದೆ. ಗೋಲ್ಡ್ ಕಾರ್ಡ್​ಗೆ ಎರಡು ಗಂಟೆ, ಶಿಷ್ಟಾಚಾರಕ್ಕೆ ಎರಡು ಗಂಟೆ ಮಾತ್ರ ಸಮಯ ನಿಗದಿ ಮಾಡಿ ಎಂದು ಸಲಹೆ ನೀಡಲಾಗಿದೆ. ಇದೆಲ್ಲ ಮಾಡಿದರೆ ಜನರಿಗೆ ಅನುಕೂಲ ಆಗುತ್ತೆ ಎನ್ನುವುದಾದರೆ ಈ ಎಲ್ಲಾ ರೀತಿಯ ಬದಲಾವಣೆ ಮಾಡೋಣ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ

ಹಾಸನಾಂಬೆ ದೇವಾಲಯದ ಆಡಳಿತ ಮಂಡಳಿ ಅಧಿಕಾರಿ ಮಾರುತಿ ಮಾತನಾಡಿ, ಹಾಸನಾಂಬೆ ಉತ್ಸವ ವೇಳೆ ದರ್ಶನದ ಪಾಸ್ ವ್ಯವಸ್ಥೆ ಸಂಪೂರ್ಣ ರದ್ದು ಮಾಡಲಾಗುವುದು. ಪಾಸ್ ಬದಲು ಗೋಲ್ಡ್ ಕಾರ್ಡ್ ಬಳಕೆ ಇರಲಿದ್ದು, ಒಂದು ಗೋಲ್ಡ್ ಕಾರ್ಡ್​ಗೆ ಒಬ್ಬರಿಗೆ ಮಾತ್ರ ದರ್ಶನಕ್ಕೆ ಅವಕಾಶವಿದ್ದು, ಮುಂಜಾನೆ 5ರಿಂದ ದರ್ಶನಕ್ಕೆ ಅವಕಾಶವಿರಲಿದೆ ಎಂದು ತಿಳಿಸಿದರು


Spread the love

LEAVE A REPLY

Please enter your comment!
Please enter your name here