ಹಾಸನ:- ಬೇಲೂರು ತಾಲೂಕಿನ, ಚಿಕ್ಕಸಾಲಾವಾರ ಗ್ರಾಮದ ಬಳಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡ ಘಟನೆ ಜರುಗಿದೆ.
Advertisement
ಇಂದು ಬೆಳಗ್ಗೆ ಉಮೇಶ್ ಹಾಗೂ ರೇವತಿ (50) ದಂಪತಿ ಕೂಲಿ ಕೆಲಸಕ್ಕೆ ಬೈಕ್‍ನಲ್ಲಿ ಹೋಗುತ್ತಿದ್ದರು. ಈ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ರೇವತಿಯವರ ತಲೆ ಮತ್ತು ಸೊಂಟದ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಅದೃಷ್ಟವಶಾತ್ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಾಳುಗಳಿಗೆ ಅರೇಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹಾಸನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇನ್ನೂ ಇತ್ತೀಚೆಗೆ ಹಾಸನದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.