ಹಾಸನ: ಹಾಸನ ಜಿಲ್ಲೆ ಆಲೂರು ಪಟ್ಟಣದ ಆಲೂರು ಪ್ರದೇಶದಲ್ಲಿ ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ಊರಿಗೆ ಊರೇ ಬೆಚ್ಚಿಬೀಳುವಂತಹ ಸ್ಫೋಟ ಸಂಭವಿಸಿತ್ತು.
Advertisement
ಖಾಸಗಿ ಕಂಪನಿ ಉದ್ಯೋಗಿಯಾದ ಸುದರ್ಶನ್ ಆಚಾರ್ (32)ಮತ್ತು ಪತ್ನಿ ಕಾವ್ಯಾ (27) ತಮ್ಮ ಇಬ್ಬರು ಮಕ್ಕಳ ಜೊತೆ ಮನೆಯಲ್ಲಿದ್ದ ವೇಳೆ ಈ ಘೋರ ದುರಂತ ಸಂಭವಿಸಿತ್ತು.
ಇದೀಗ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.ಸೋಮವಾರ ರಾತ್ರಿ ಹಿಮ್ಸ್‌ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.
ರಾತ್ರಿಯೇ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಝೀರೋ ಟ್ರಾಫಿಕ್‌ನಲ್ಲಿ ರವಾನೆ ಮಾಡಲಾಗಿತ್ತು.ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.