ಹಾಸನ: ನಗರದಲ್ಲಿ ನಿಯಮ ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿದ್ದ ಪಬ್‌ಗಳ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಎಎಸ್ಪಿ ಹಾಗೂ ಡಿವೈಎಸ್ಪಿ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಪಬ್‌ಗಳ ಪರವಾನಗಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಪರಿಶೀಲಿಸಲಾಯಿತು. ಈ ವೇಳೆ ದಾಖಲೆಗಳನ್ನು ಒದಗಿಸುವಂತೆ ಪಬ್ ಮ್ಯಾನೇಜರ್‌ಗೆ ಪೊಲೀಸರು ಸೂಚಿಸಿದ್ದು, ಸೂಕ್ತ ದಾಖಲೆಗಳನ್ನು ನೀಡಲು ಮ್ಯಾನೇಜರ್ ಪರದಾಡಿದರೆನ್ನಲಾಗಿದೆ.
ತಪಾಸಣೆ ಸಂದರ್ಭದಲ್ಲಿ ಇಬ್ಬರು ಅಪ್ರಾಪ್ತರಿಗೆ ಪಬ್ ಒಳಗೆ ಪ್ರವೇಶ ನೀಡಿದ್ದಲ್ಲದೆ, ಅವರಿಗೆ ಮದ್ಯವನ್ನೂ ಪೂರೈಸಿರುವುದು ಬೆಳಕಿಗೆ ಬಂದಿದೆ. ಬಳಿಕ ಪೊಲೀಸರು ಇಬ್ಬರು ಅಪ್ರಾಪ್ತರನ್ನು ಆಲ್ಕೋಮೀಟರ್ ಮೂಲಕ ಪರೀಕ್ಷಿಸಿದಾಗ, ಅವರು ಮದ್ಯ ಸೇವಿಸಿರುವುದು ದೃಢಪಟ್ಟಿದೆ.
ನಿಯಮಗಳನ್ನು ಉಲ್ಲಂಘಿಸಿ ಅಪ್ರಾಪ್ತರಿಗೆ ಮದ್ಯ ಪೂರೈಸಿರುವುದಕ್ಕೆ ಪಬ್ ಮ್ಯಾನೇಜರ್‌ರನ್ನು ಎಸ್ಪಿ ಶುಭನ್ವಿತಾ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ, ಘಟನೆಗೆ ಸಂಬಂಧಿಸಿದಂತೆ ಪಬ್ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದ ಪಬ್‌ಗಳಲ್ಲಿ ನಿಯಮ ಪಾಲನೆ ಖಚಿತಪಡಿಸಿಕೊಳ್ಳಲು ಪೊಲೀಸರು ಪರಿಶೀಲನೆ ನಡೆಸಿದ್ದು, ಅಪ್ರಾಪ್ತರಿಗೆ ಮದ್ಯ ಪೂರೈಸುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.



