ಹಾಸನ: ಹಾಸನಾಂಬೆ ದೇವಿಯ ದರ್ಶನೋತ್ಸವಕ್ಕೆ ಭಕ್ತರ ಮಹಾಪೂರವೇ ಹರಿದುಬರುತ್ತಿದೆ.
ದರ್ಶನೋತ್ಸವದ ಎರಡನೇ ದಿನವೂ ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ಎಲ್ಲ ಸರತಿ ಸಾಲುಗಳೂ ಭರ್ತಿಯಾಗಿವೆ.
ಇಂದು ಬೆಳಿಗ್ಗೆ 6 ಗಂಟೆಯಿಂದಲೇ ದೇವಿಯ ದರ್ಶನ ಆರಂಭವಾಗಿದ್ದು, ಮಹಿಳಾ ಭಕ್ತರ ಸಂಖ್ಯೆಯೂ ಹೆಚ್ಚಾಗಿದೆ. ನಿನ್ನೆ ಒಂದೇ ದಿನ 70 ಸಾವಿರಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ.
ನೈವೇದ್ಯದ ಸಮಯವನ್ನು ಹೊರತುಪಡಿಸಿ ಉಳಿದ ಎಲ್ಲ ಸಮಯದಲ್ಲೂ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇನ್ನು ಬೆಳಿಗ್ಗೆ 8ರಿಂದ 10 ಗಂಟೆಯವರೆಗೆ ಗೋಲ್ಡ್ ಕಾರ್ಡ್ ಹೊಂದಿರುವವರಿಗೆ ಹಾಗೂ 10.30ರಿಂದ 12.30ರವರೆಗೆ ಗಣ್ಯರಿಗೆ ದರ್ಶನದ ವ್ಯವಸ್ಥೆ ಮಾಡಲಾಗಿದೆ.










