Hasanamba 2023: ಇಂದಿನಿಂದ ಹಾಸನಾಂಬೆಯ ದರ್ಶನ ಆರಂಭ

0
Spread the love

ಹಾಸನ: ವರ್ಷಕ್ಕೆ ಒಂದು ಬಾರಿಯಷ್ಟೇ ದರ್ಶನ ಭಾಗ್ಯ ಕರುಣಿಸಲಿರುವ ಹಾಸನದ ಅಧಿದೇವತೆ ಹಾಸನಾಂಬೆಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಬಾರಿಯ ಜಾತ್ರಾ ಮಹೋತ್ಸವ ಇಂದಿನಿಂದ ನ.15 ರವರೆಗೆ ನಡೆಯಲಿದೆ. ಆಶ್ವೀಜ ಮಾಸದ ಮೊದಲ ಇಂದು ಮಧ್ಯಾಹ್ನ 12.30 ರ ನಂತರ ಗೊನೆಯುಳ್ಳ ಬಾಳೆ ಕಂಬ ಕಡಿದ ನಂತರ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದೆ.

Advertisement

ಗರ್ಭಗುಡಿಯ ಬಾಗಿಲು ತೆರೆದ ಮೊದಲ ಮತ್ತು ಅಂತಿಮ ದಿನ ಸಾರ್ವಜನಿಕ ದರ್ಶನ ಇರುವುದಿಲ್ಲ. ಹದಿನೈದು ದಿನಗಳಲ್ಲಿ ಹದಿಮೂರು ದಿನಗಳು ಮಾತ್ರ 24*7 ಭಕ್ತರಿಗೆ ತಾಯಿ ಹಾಸನಾಂಬೆ ದರ್ಶನ ಕರುಣಿಸಲಿದ್ದಾಳೆ. ಈ ಬಾರಿ ಜಾತ್ರಾ ಮಹೋತ್ಸವ ವಿಶೇಷತೆಯಿಂದ ಕೂಡಿದ್ದು ಹೆಲಿಟೂರಿಸಂ, ಪ್ಯಾರಾ ಸೈಲಿಂಗ್, ಪ್ಯಾರಾ ಮೋಟಾರ್, ಚಾಪರ್ ನಲ್ಲಿ ಹಾರಾಟ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದೆ.


Spread the love

LEAVE A REPLY

Please enter your comment!
Please enter your name here