ಬೆಂಗಳೂರು;- ಕಾಂಗ್ರೆಸ್ ನಲ್ಲಿ ದ್ವೇಷದ ರಾಜಕಾರಣ ಹೆಚ್ಚಾಗಿದೆ ಎಂದು ಮಾಜಿ ಸಿಎಂ ಡಿವಿ ಸದಾನಂದಗೌಡ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ನಂಬರ್ ಒನ್ ಇದೆ. ಸರ್ಕಾರವು ರೈತರಿಗೆ ಸಹಕಾರ ಕೊಡುತ್ತಿಲ್ಲ, ದ್ವೇಷದ ರಾಜಕಾರಣ ಮಾಡುತ್ತಿದೆ. ತಮ್ಮ ವಿರೋಧಿಗಳನ್ನು ಯಾವ ರೀತಿಯಲ್ಲಿ ಬೇಕಾದರೂ ತೆಗೆದುಕೊಂಡು ಹೋಗುವ ಪರಿಸ್ಥಿತಿ ಇದೆ. ಆಂತರಿಕ ಕಚ್ಚಾಟ ಶುರುವಾಗಿದೆ.
ಶಾಮನೂರು ಶಿವಶಂಕರಪ್ಪ, ಸತೀಶ್ ಜಾರಕಿಹೊಳಿ ಸೇರಿದಂತೆ ಅನೇಕರಿಂದ ಆಂತರಿಕ ಕಚ್ಚಾಟ ಉಂಟಾಗಿದೆ. ಆಡಳಿತಕ್ಕೆ ಬಂದ ಇಷ್ಟು ದಿನದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ.
ಅವರ ಏಜೆಂಟ್ ಮೂಲಕ ಕಲೆಕ್ಷನ್ ಸೆಂಟರ್ ಮಾಡಿಕೊಂಡಿದೆ. ಇದೆಲ್ಲವನ್ನೂ ರಾಷ್ಟ್ರೀಯ ನಾಯಕರ ಗಮನಕ್ಕೆ ತರಬೇಕಿದೆ. ಜನರಿಗೆ ತಿಳಿಸಲು ಇದು ಅತ್ಯಂತ ಸಕಾಲ. ಈ ಸಂಬಂಧ ದೆಹಲಿಗೆ ಹೋಗಲಿದ್ದೇನೆ ಎಂದರು.
ಕಾಂಗ್ರೆಸ್ ನಾಯಕರ ಹಣೆ ಬರಹ ಇಷ್ಟೇ. ಕಾಂಗ್ರೆಸ್ ಮುಕ್ತ ಭಾರತ ಆಗಬೇಕು. ಲೂಟಿ ಹೊಡೆಯುವ ಕೆಲಸ ಮಾಡಲಾಗ್ತಿದೆ. ಅದೆಲ್ಲವನ್ನು ಜನರಿಗೆ ಮುಟ್ಟಿಸುವ ಕೆಲಸ ಆಗಬೇಕಿದೆ. ಆ ನಿಟ್ಟಿನಲ್ಲಿ ಹೈಕಮಾಂಡ್ ನಾಯಕರ ಜೊತೆ ಮಾತುಕತೆ ನಡೆಸುತ್ತೇನೆ ಎಂದರು.