HomeGadag Newsರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಹವಳದ ನೇಮಕ

ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಹವಳದ ನೇಮಕ

Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಸರಕಾರಿ ನೌಕರರ ಸಂಘದ ಅಧ್ಯಕ್ಷ ಗುರುರಾಜ ಹವಳದ ಅವರನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರು ನೇಮಕಾತಿ ಪತ್ರ ನೀಡಿ ಹವಳದ ಅವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ರಾಜ್ಯ ಸರಕಾರಿ ನೌಕರರ ಉಪಾಧ್ಯಕ್ಷರು ಹಾಗೂ ಜಿಲ್ಲಾ ಅಧ್ಯಕ್ಷ ಬಸವರಾಜ ಬಳ್ಳಾರಿ ಇದ್ದರು.
ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಗುರುರಾಜ ಹವಳದ ಅವರು ಉತ್ಸಾಹದಿಂದ ಸಂಘಟನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ನೌಕರರ ಸಮಸ್ಯೆಗಳ ಪರಿಹಾರಕ್ಕಾಗಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಅವರ ಸೇವೆಯನ್ನು ಪರಿಗಣಿಸಿ ರಾಜ್ಯ ಮಟ್ಟದ ಜವಾಬ್ದಾರಿ ನೀಡಿರುವುದಕ್ಕೆ ತಾಲೂಕು ನೌಕರರ ಸಂಘದ ಪದಾಧಿಕಾರಿಗಳು ಹಾಗೂ ನೌಕರರು ಹರ್ಷ ವ್ಯಕ್ತಪಡಿಸಿದ್ದಾರೆ.
ಗುರುರಾಜ ಹವಳದ ಅವರ ನೇಮಕಕ್ಕೆ ಬಿ.ಎಸ್. ಹರ್ಲಾಪೂರ, ಎಂ.ಎ. ನಧಾಪ್, ಎಂ.ಡಿ. ವಾರದ, ಬಸವರಾಜ ಯರಗುಪ್ಪಿ, ಡಿ.ಎಚ್. ಪಾಟೀಲ, ಎಲ್.ಎನ್. ನಂದೆಣ್ಣವರ, ಎಂ.ಎಸ್. ಹಿರೇಮಠ, ಚಂದ್ರು ನೇಕಾರ, ಡಿ.ಡಿ. ಲಮಾಣಿ ಸೇರಿದಂತೆ ತಾಲೂಕು ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!