HomeKarnataka Newsಗೌರಿ-ಗಣೇಶ ಹಬ್ಬಕ್ಕೆ ಮುಳ್ಳಯ್ಯನಗಿರಿ ಪ್ರವಾಸ ಪ್ಲಾನ್ ಮಾಡಿದ್ದೀರಾ? ಸೆ.14ರಂದು ನೋ ಎಂಟ್ರಿ

ಗೌರಿ-ಗಣೇಶ ಹಬ್ಬಕ್ಕೆ ಮುಳ್ಳಯ್ಯನಗಿರಿ ಪ್ರವಾಸ ಪ್ಲಾನ್ ಮಾಡಿದ್ದೀರಾ? ಸೆ.14ರಂದು ನೋ ಎಂಟ್ರಿ

For Dai;y Updates Join Our whatsapp Group

ಚಿಕ್ಕಮಗಳೂರು: ಗೌರಿ-ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ಚಿಕ್ಕಮಗಳೂರಿನ ಪ್ರಸಿದ್ಧ ಗಿರಿಧಾಮಗಳಿಗೆ ಭೇಟಿ ನೀಡಲು ಯೋಜಿಸುತ್ತಿರುವ ಪ್ರವಾಸಿಗರಿಗೆ ಜಿಲ್ಲಾಡಳಿತವು ಪ್ರಮುಖ ಮುನ್ನೆಚ್ಚರಿಕೆ ಸೂಚನೆಯೊಂದನ್ನು ನೀಡಿದೆ. ಹಬ್ಬದ ಆಚರಣೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ 14ರಂದು ಒಂದು ದಿನದ ಮಟ್ಟಿಗೆ ಮುಳ್ಳಯ್ಯನಗಿರಿ ಸೇರಿದಂತೆ ಚಂದ್ರದ್ರೋಣ ಪರ್ವತ ಸಾಲಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಸಾಂಪ್ರದಾಯಿಕ ಪೂಜೆ ಹಾಗೂ ಭಕ್ತರ ಆಗಮನ: ಚೌತಿ ಹಬ್ಬದ ಹಿನ್ನೆಲೆಯಲ್ಲಿ ಪ್ರಸಿದ್ಧ ಗಿರಿಧಾಮಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಹಾಗೂ ಶ್ರೀ ಗುರು ನಾರುಕಂತೆ ಮಠಗಳಿಗೆ ಹಣ್ಣು-ಕಾಯಿ ನೈವೇದ್ಯ ಮಾಡಿಸಲು ಮತ್ತು ‘ಚೌತಿ ಕಾಯಿ’ ಹೊಡೆಯಲು ಸುತ್ತಮುತ್ತಲಿನ 40ಕ್ಕೂ ಹೆಚ್ಚು ಗ್ರಾಮಗಳ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ನೂರಾರು ವರ್ಷಗಳಿಂದ ತಲೆತಲಾಂತರದಿಂದ ನಡೆದುಕೊಂಡು ಬಂದಿರುವ ಈ ಸಾಂಪ್ರದಾಯಿಕ ಧಾರ್ಮಿಕ ಆಚರಣೆಗೆ ಯಾವುದೇ ರೀತಿಯ ಅಡಚಣೆಯಾಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

ಟ್ರಾಫಿಕ್ ಜಾಮ್ ತಡೆಯಲು ಮುಂಜಾಗ್ರತೆ: ಹಬ್ಬದ ದಿನದಂದು ಪ್ರವಾಸಿಗರ ವಾಹನಗಳ ದಟ್ಟಣೆಯಿಂದಾಗಿ ಗಿರಿಧಾಮಗಳ ಕಿರಿದಾದ ರಸ್ತೆಗಳಲ್ಲಿ ತೀವ್ರ ಸ್ವರೂಪದ ಟ್ರಾಫಿಕ್ ಜಾಮ್ ಉಂಟಾಗುವ ಭಾರಿ ಸಾಧ್ಯತೆಯಿರುವುದರಿಂದ, ಸಾರ್ವಜನಿಕರ ಹಾಗೂ ಭಕ್ತಾದಿಗಳ ಸುಗಮ ಸಂಚಾರಕ್ಕಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಪ್ರವಾಸ ಮುಂದೂಡಲು ಜಿಲ್ಲಾಧಿಕಾರಿ ಮನವಿ: ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಹಾಗೂ ಮಾಣಿಕ್ಯಧಾರಾ ಭಾಗಗಳಿಗೆ ತೆರಳಲು ಬಯಸುವ ಪ್ರವಾಸಿಗರು ಸೆಪ್ಟೆಂಬರ್ 14ರ ತಮ್ಮ ಪ್ರವಾಸವನ್ನು ಮುಂದೂಡಬೇಕೆಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ ಸಾರ್ವಜನಿಕರಲ್ಲಿ ಕೋರಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img