ಹಾವೇರಿ: ನೇಣು ಬಿಗಿದುಕೊಂಡು SSLC ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಕೊಂಡಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪಟ್ಟಣದ ಕಿತ್ತೂರು ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ. ರೇಖಾ ಗೌಡರ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದು,
Advertisement
ಮೃತ ರೇಖಾ ಗೌಡರ ಬೆಳಗ್ಗೆ ಗೆಳತಿಯರೊಂದಿಗೆ ತಿಂಡಿ ತಿನ್ನಲು ಹೋಗಿದ್ದಾಳೆ. ವಾಪಸ್ ಬಂದು ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಆದರೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.