ಹಾವೇರಿ:- ಇಲ್ಲಿನ ವರದಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಜರುಗಿದೆ.
Advertisement
ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದ ಬಳಿಯ ವರದಾ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಈ ಅವಘಡ ಸಂಭವಿಸಿದೆ. 18 ವರ್ಷದ ಕಾರ್ತಿಕ್ ಮೃತ ಯುವಕ. ವರದಾ ನದಿಗೆ ಈಜಲು ತೆರಳಿದ್ದ ವೇಳೆ ನದಿಯಲ್ಲಿದ್ದ ಮುಳ್ಳುಕಂಟೆಗೆ ಸಿಲುಕಿ ಯುವಕ ಮೃತಪಟ್ಟಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ನುರಿತ ಈಜು ತಜ್ಞ ಸಿದ್ದು ಚರಂತಿಮಠ ನಿರಂತರವಾಗಿ ಹನ್ನೆರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಯುವಕನ ಮೃತದೇಹವನ್ನು ಹೊರತೆಗೆದಿದ್ದಾರೆ.
ಬುಧವಾರ ಅಂದ್ರೆ ನಿನ್ನೆ ಮಧ್ಯಾಹ್ನ ನದಿಗೆ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ. ನಿರಂತರ ಕಾರ್ಯಾಚರಣೆ ನಡೆಸಿ ಗುರುವಾರ ಸಂಜೆ ಯುವಕನ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ ಎಂದು ತಿಳಿದು ಬಂದಿದೆ.