ಸಿದ್ದರಾಮಯ್ಯಗೆ ಬಂಡೆಯಿಂದಲೇ ಡೇಂಜರ್ ಎಂದ HD ಕುಮಾರಸ್ವಾಮಿ

0
Spread the love

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಮಂತ್ರಿಗಳು ನನ್ನ ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆಲ್ಲ ಜಗ್ಗುವ ಜಾಯಮಾನ ನನ್ನದಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ಯಾವುದೋ ಹಳೆಯ ಪ್ರಕರಣವನ್ನು ಕೆದಕಿ, ಸುಪ್ರೀಂ ಕೋರ್ಟ್ ನಲ್ಲಿರುವ ಪ್ರಕರಣ ಇಟ್ಟುಕೊಂಡು ರಾಜ್ಯಪಾಲರನ್ನು ಅಪಮಾನಿಸುವ, ನನ್ನನ್ನು ಬ್ಲಾಕ್ ಮೇಲ್ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇದಕ್ಕೆಲ್ಲಾ ಕೇರ್ ಮಾಡುವ ಪೈಕಿ ನಾನಲ್ಲ, ಈ ಸರ್ಕಾರಕ್ಕೂ ಅದು ಗೊತ್ತಿದೆ ಎಂದು ಕಿಡಿಕಾರಿದರು.

Advertisement

ರಾಜ್ಯಪಾಲರಿಗೆ ಸರ್ಕಾರದಿಂದ ಧಮ್ಕಿ

ರಾಜ್ಯಪಾಲರು ಮೂಡಾ ಹಗರಣ ವಿಚಾರಣೆಗೆ ಅನುಮತಿ ನೀಡಿದಾಕ್ಷಣ ಇಡೀ ಸಚಿವರು, ಶಾಸಕರನ್ನು ಇಟ್ಟುಕೊಂಡು ರಾಜ್ಯಪಾಲರಿಗೆ ಧಮ್ಕಿ ಹಾಕುವ, ಜನರನ್ನು ಎತ್ತಿ ಕಟ್ಟುವ ಕೆಲಸವನ್ನು ಸಿದ್ದರಾಮಯ್ಯ ಅವರು ಮಾಡುತ್ತಿದ್ದಾರೆ. ನಾನು ಹೀಗೆಲ್ಲಾ ಮಾಡಿಲ್ಲ, ನನ್ನ ವಿರುದ್ಧ ಆರೋಪ ಕೇಳಿಬಂದಾಗ ಒಬ್ಬನೇ ಎದುರಿಸುತ್ತೇನೆ ಎಂದು ಹೇಳಿದ್ದೆ. ವಿಧಾನಸಭೆ ಕಲಾಪದಲ್ಲಿಯೂ ಹೇಳಿದ್ದೇನೆ. ಬೇಕಾದರೆ ಕಡತ ತೆಗೆದು ನೋಡಬಹುದು ಎಂದು ಹೇಳಿದರು ಕೇಂದ್ರ ಸಚಿವರು.

ನನ್ನ ವಿರುದ್ಧ 2006ರಲ್ಲಿ ಗಣಿ ಆರೋಪ ಮಾಡಿದಾಗ ನಾನೊಬ್ಬನೇ ಎದುರಿಸಿದೆ. ಶಾಸಕರು, ಸಚಿವರನ್ನು ಅಡ್ಡ ಇಟ್ಟುಕೊಂಡು ರಕ್ಷಣೆ ಪಡೆಯುವ ಕೆಲಸ ಮಾಡಲಿಲ್ಲ. ಹೇಡಿತನ ಪ್ರದರ್ಶಿಸಲಿಲ್ಲ, ಧೈರ್ಯವಾಗಿ ಒಬ್ಬನೇ ಎದುರಿಸಿದೆ ಎಂದರು ಸಚಿವರು.

ರಾಜ್ಯದಲ್ಲಿ ಅತ್ಯಂತ ಕೆಟ್ಟ ಪರಿಸ್ಥಿತಿ ಇದೆ

ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ನಂತರ ಕಾಂಗ್ರೆಸ್ ವರಸೆಯೇ ಬದಲಾಗಿದೆ. ಲೋಕಸಭೆಯಲ್ಲಿ ಪಕ್ಷದ ಸಂಸದರಿಗೆ ಕೈಗೆ ಸಂವಿಧಾನದ ಪ್ರತಿ ಕೊಟ್ಟು ಪ್ರಮಾಣ ಸ್ವೀಕಾರ ಮಾಡಿಸುವ ಕಾಂಗ್ರೆಸ್, ಕರ್ನಾಟಕದಲ್ಲಿ ಮಾತ್ರ ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರಾಗಿರುವ ರಾಜ್ಯಪಾಲರ ವಿರುದ್ಧ ಅತ್ಯಂತ ಕೆಟ್ಟದಾಗಿ, ಅವಹೇಳನಕಾರಿಯಾಗಿ ಪ್ರತಿಭಟನೆ ಮಾಡಿಸುತ್ತಿದೆ. ಸಚಿವರು, ಶಾಸಕರು ರಾಜ್ಯಪಾಲರ ಬಗ್ಗೆ ಬಹಳ ಅಗೌರವದಿಂದ ನಡೆದುಕೊಳ್ಳುತ್ತಿದ್ದಾರೆ. ಬೇರೆ ಯಾವ ರಾಜ್ಯದಲ್ಲಿ ಇಂಥ ಕೆಟ್ಟ ಪರಿಸ್ಥಿತಿಯನ್ನು ನಾನು ನೋಡಿಲ್ಲ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

 


Spread the love

LEAVE A REPLY

Please enter your comment!
Please enter your name here