ನಾಮಪತ್ರ ಸಲ್ಲಿಕೆ ವೇಳೆ ಜನ ಸಾಗರ: ಕಾಂಗ್ರೆಸ್ ನಾಯಕರ ಕಣ್ಣು ಕುಕ್ಕಿದೆ ಎಂದ ಹೆಚ್.ಡಿ.ಕುಮಾರಸ್ವಾಮಿ

0
Spread the love

ಬೆಂಗಳೂರು: ಜನರ ಬಳಿ ನಾವು ಮತ ಕೇಳುತ್ತೇವೆ, ಅವರೇ ತೀರ್ಪು ಕೊಡುತ್ತಾರೆ ಎಂದು  ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಆ ಸಂದರ್ಭದಲ್ಲಿ ಕ್ಷೇತ್ರದ ಕಾರ್ಯಕರ್ತರು, ಸಾರ್ವಜನಿಕರು ಸೇರಿದ್ದರು. ಎನ್‌ಡಿಎ ಮೈತ್ರಿಕೂಟದ ನಾಯಕರು ದೊಡ್ಡ ಪ್ರಮಾಣದಲ್ಲಿ ಸೇರಿದ್ದರು. ಇದು ಐತಿಹಾಸಿಕ ಸಭೆ ಆಗಿತ್ತು. ಇದು ಕಾಂಗ್ರೆಸ್ ನಾಯಕರ ಕಣ್ಣು ಕುಕ್ಕಿದೆ ಎಂದು ದೂರಿದರು.

Advertisement

ಈ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ಜನ ಕಾರ್ಯಕ್ರಮಕ್ಕೆ ಬರಬಾರದಾ? ಶುಕ್ರವಾರ ನಾಮಪತ್ರ ಸಲ್ಲಿಕೆಯ ನಂತರ ಒಂದು ನೊಟೀಸ್ ಕೊಟ್ಟಿದ್ದಾರೆ. ಬರುವವರ ಮೇಲೆಲ್ಲಾ ಕೇಸ್ ಹಾಕಿಕೊಂಡು ಇವರು ಚುನಾವಣೆ ನಡೆಸಲು ಹೊರಟಿದ್ದಾರೆ. ಶುಕ್ರವಾರ ನಮ್ಮ ಪಕ್ಷದ ಅಧ್ಯಕ್ಷರಿಗೆ ನೊಟೀಸ್ ಕೊಟ್ಟಿದ್ದಾರೆ. ಇದಕ್ಕೆಲ್ಲಾ ನಾವು ಹೆದರುವ ಪ್ರಶ್ನೆ ಇಲ್ಲ.

ಜನರ ಬಳಿ ನಾವು ಮತ ಕೇಳುತ್ತೇವೆ. ಅವರೇ ತೀರ್ಪು ಕೊಡುತ್ತಾರೆ ಎಂದು ಗುಡುಗಿದರು. ಸರ್ಕಾರ ಈ ಕಾರ್ಯಕ್ರಮಕ್ಕೆ ಬಂದ ವಾಹನಗಳಿಗೆ ನೊಟೀಸ್ ನೀಡಿದೆ. ಸಿಎಂ, ಡಿಸಿಎಂ ಆದಿಯಾಗಿ ಅವರ ಕಡೆಯಿಂದ ಎಲ್ಲಾರೂ ಚನ್ನಪಟ್ಟಣಕ್ಕೆ ಹೋಗಿದ್ದರಲ್ಲವೇ? ಹಾಗಿದ್ದರೆ, ಅವರ ಸಭೆಗಳಿಗೆ ಬಂದ ಜನರಿಗೆ ವಾಹನದ ವ್ಯವಸ್ಥೆ ಮಾಡೇ ಇರಲಿಲ್ಲವೇ? ಎಂದು ಖಾರವಾಗಿ ಪ್ರಶ್ನಿಸಿದರು.


Spread the love

LEAVE A REPLY

Please enter your comment!
Please enter your name here