ರಕ್ತದಲ್ಲಿ ಚಿತ್ರಿಸಿದ ಎಚ್‌ಡಿಡಿ ಭಾವಚಿತ್ರ ಉಡುಗೊರೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಬೆಂಗಳೂರಿನಲ್ಲಿರುವ ಜೆಡಿಎಸ್ ಕೇಂದ್ರ ಕಛೇರಿಯಲ್ಲಿ ಆಯೋಜಿಸಿದ್ದ ಪಕ್ಷದ 25 ವರ್ಷಗಳ ರಜತ ಮಹೋತ್ಸವ ಸಂಭ್ರಮಾಚರಣೆಯ ಕಾರ್ಯಕ್ರಮದಲ್ಲಿ ಗದಗ ಜಿಲ್ಲೆಯ ಯುವ ಮುಖಂಡ ಪ್ರಭುರಾಜಗೌಡ ವಿ.ಪಾಟೀಲ ತಮ್ಮ ರಕ್ತದಲ್ಲಿ ರಚಿಸಿದ ಮಾಜಿ ಪ್ರಧಾನಿ ದೇವೇಗೌಡರ ಭಾವಚಿತ್ರವನ್ನು ಮಾಜಿ ಪ್ರಧಾನಮಂತ್ರಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರಿಗೆ ನೀಡಿ ಅವರಿಂದ ಆಶೀರ್ವಾದ ಪಡೆದುಕೊಂಡರು.

Advertisement

ಇದೇ ವೇದಿಕೆಯಲ್ಲಿ ಮಾಜಿ ಮುಖ್ಯಮಂತ್ರಿಗಳು, ಹಾಲಿ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಹಾಗೂ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿರವರ ಸಮ್ಮುಖದಲ್ಲಿ ಉಡುಗೊರೆ ನೀಡಿ, ಜೆಡಿಎಸ್ ಪಕ್ಷದ ಮೇಲಿಟ್ಟಿರುವ ಅಭಿಮಾನವನ್ನು ವ್ಯಕ್ತಪಡಿಸಿದರು. ಕಳೆದ 15 ವರ್ಷಗಳಿಂದ ಪಕ್ಷದಲ್ಲಿ ಸೇವೆ ಸಲ್ಲಿಸುತ್ತಾ, ಹಲವಾರು ಹೋರಾಟಗಳನ್ನು, ಕಾರ್ಯಕ್ರಮಗಳನ್ನು ರೂಪಿಸಿ ಸಂಘಟನೆ ಮಾಡುತ್ತಾ ಬಂದಿರುವ ಪ್ರಭುರಾಜಗೌಡ ಪಾಟೀಲ ಅವರಿಗೆ ಮತ್ತೆ ಪಕ್ಷವನ್ನು ಸಕ್ರಿಯವಾಗಿ ಸಂಘಟಿಸುವಂತೆ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಸೂಚಿಸಿದರು.

ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಶಾಸಕರು, ಸಂಸದರು, ಮಾಜಿ ಶಾಸಕರು, ರಾಜ್ಯದ ಎಲ್ಲ ಜಿಲ್ಲೆಗಳ ಜೆಡಿಎಸ್ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here