ಬಂಟ್ವಾಳ: ನಾನು ಕುಮಾರಸ್ವಾಮಿ ಜೊತೆ ಮಾತನಾಡಿ ಸಂಜೆಯೊಳಗೆ ನಿರ್ಧಾರಕ್ಕೆ ಬರುತ್ತೆವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ಹೆಚ್ಡಿ ಕುಮಾರಸ್ವಾಮಿ ಈ ಪಾದಯಾತ್ರೆ ನಡೆಸಲು ಜೆಡಿಎಸ್ನ್ನು ಬಿಜೆಪಿ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಹೀಗಾಗಿ ಇದಕ್ಕೆ ನಮ್ಮ ಬೆಂಬಲವಿಲ್ಲ ಎಂದಿದ್ದರು. ಈ ಕುರಿತು ಬಂಟ್ವಾಳದಲ್ಲಿ ಮಾತನಾಡಿದ ಅವರು, ಜೆಡಿಎಸ್ ರಾಜ್ಯಾಧ್ಯಕ್ಷ ಜಿ.ಟಿ.ದೇವೇಗೌಡರು ಕೂಡ ಪಾದಯಾತ್ರೆಗೆ ವಿರೋಧ ಮಾಡಿದ್ದಾರೆ.
ಕೃಷಿ, ಮಳೆ ವಿಚಾರ ಇಟ್ಟುಕೊಂಡು ಪಾದಯಾತ್ರೆ ಮುಂದೂಡಿ ಅಂದಿದ್ದಾರೆ. ನಾವು ಕೂಡ ಕೇಂದ್ರದ ನಾಯಕರ ಜೊತೆ ಈ ಬಗ್ಗೆ ಮಾತನಾಡುತ್ತೇವೆ. ಜೆಡಿಎಸ್ ಕೂಡ ಎನ್ಡಿಎ ಭಾಗ, ಹೀಗಾಗಿ ಅವರು ಹೋರಾಟದಲ್ಲಿ ಒಟ್ಟಿಗೆ ಇರಬೇಕು. ನಾನು ಕುಮಾರಸ್ವಾಮಿ ಜೊತೆ ಮಾತನಾಡಿ ಸಂಜೆಯೊಳಗೆ ನಿರ್ಧಾರಕ್ಕೆ ಬರುತ್ತೆವೆ ಎಂದು ಹೇಳಿದರು. ಜೊತೆಗೆ ಇದರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಆದರೆ ಯಾವಾಗ ಪಾದಯಾತ್ರೆ ಆಗುತ್ತೆ ಅನ್ನೋದಷ್ಟೇ ಈಗಿರುವುದು ಎಂದು ಹೇಳಿದರು.