ಚಿನ್ನ ವಂಚಕಿ ಐಶೂ ಕೇಸ್ ನಲ್ಲಿ HDK ಕುಟುಂಬ ಹೆಸರು ಪ್ರಸ್ತಾಪ: ಕುಮಾರಸ್ವಾಮಿ ಹೇಳಿದ್ದೇನು!?

0
Spread the love

ಬೆಂಗಳೂರು:- ಚಿನ್ನ ವಂಚಕಿ ಐಶ್ವರ್ಯಗೌಡ ಕೇಸ್ ನಲ್ಲಿ HDK ಕುಟುಂಬ ಹೆಸರು ಪ್ರಸ್ತಾಪ ಆಗುತ್ತಿರುವ ವಿಚಾರವಾಗಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು, ಐಶ್ವರ್ಯ ಗೌಡ ಕೇಸ್‌ನಲ್ಲಿ ನಿಖಿಲ್, ಅನಿತಾ ಕುಮಾರಸ್ವಾಮಿ ಹೆಸರು ಪ್ರಸ್ತಾಪ ಆಗುತ್ತಿರುವ ವಿಚಾರಕ್ಕೆ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಈಗ ರಾಜ್ಯದಲ್ಲಿ ಚಿನ್ನ, ಬೆಳ್ಳಿ ಕೇಸ್ ನಡೆಯುತ್ತಿದೆ. ನಿಖಿಲ್, ಅನಿತಾ ಕುಮಾರಸ್ವಾಮಿ ಪರಿಚಯ ಅಂತ ಹೇಳಿ ನಿನ್ನೆ ಮೊನ್ನೆಯಿಂದ ಸುದ್ದಿ ಬರುತ್ತಿದೆ. ಐಶ್ವರ್ಯ ಗೌಡ ನಿಖಿಲ್, ಅನಿತಾ ಅವರನ್ನ ಯಾವಾಗ ಭೇಟಿ ಮಾಡಿದ್ರು? ಈ ಸರ್ಕಾರದಲ್ಲಿ ಎಷ್ಟರ ಮಟ್ಟಿಗೆ ತನಿಖೆ ನಡೆಯುತ್ತಿದೆ ಅನ್ನೋದು ಗೊತ್ತಿದೆ. ಮಾಧ್ಯಮಗಳಲ್ಲಿ ಬಂದ ಮೇಲೆ ನಾನು ಮಾಹಿತಿ ಪಡೆದುಕೊಂಡಿದ್ದೇನೆ. ಕೇಸ್ ಹಿನ್ನೆಲೆ ತಿಳಿದಿಕೊಂಡಿದ್ದೇನೆ ಎಂದರು.

2016ರಲ್ಲಿ ದೂರು ಕೊಟ್ಟಿರೋದು, ವ್ಯವಹಾರ ನಡೆದಿರೋದು. ನಿಖಿಲ್, ಅನಿತಾ ಹೆಸರನ್ನು ಇದರಲ್ಲಿ ಎಳೆದಿದ್ದಾರೆ ಅಂತ ಮಾಹಿತಿ ತರಿಸಿದ್ದೇನೆ. ಈ ಸರ್ಕಾರ ಯಾರನ್ನು, ಯಾವಾಗ, ಏನು ಬೇಕಾದ್ರು ಮಾಡುತ್ತಾರೆ. ಸರ್ಕಾರದಲ್ಲಿ ಅಧಿಕಾರ ವರ್ಗವನ್ನು ಯಾವ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದಾರೆ. 2016ರಲ್ಲಿ ಪ್ರಕರಣ ಆಗಿರೋದು. 2018ರಲ್ಲಿ ನಾನೇ ಸಿಎಂ ಇದ್ದೆ. ಆಗ ಯಾಕೆ ನನ್ನ ಬಳಿ ಅನ್ಯಾಯ ಅಂತ ಇವರು ಬರಲಿಲ್ಲ ದೂರು ಕೊಡಲಿಲ್ಲ ಎಂದು ಪ್ರಶ್ನಿಸಿದರು.

ನಿಖಿಲ್, ಅನಿತಾ ಕುಮಾರಸ್ವಾಮಿ ಅವರ ಮುಖಗಳನ್ನೇ ನೊಡಿಲ್ಲ. ಹೇಗೆ ಅವರ ಪರಿಚಯ ಅಂತ ಸುದ್ದಿ ಮಾಡಿಸುತ್ತಿದ್ದೀರಿ? ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.


Spread the love

LEAVE A REPLY

Please enter your comment!
Please enter your name here