ಇದು ಕಥೆಯಲ್ಲ, ಜೀವನ!

0
He wanted a divorce and got a re-marriage
Spread the love

ವಿಜಯಸಾಕ್ಷಿ ಸುದ್ದಿ, ಕೊಪ್ಪಳ : ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಚಂದ್ರಶೇಖರ ಸಿ ವಿಶೇಷ ಮುತುವರ್ಜಿ ವಹಿಸಿ ಆಯೋಜನೆ ಮಾಡಿದ್ದ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮವು ವಿಶೇಷತೆಯ ಮೂಲಕ ಹೊಸ ಇತಿಹಾಸ ಬರೆಯಿತು. ರಾಜೀ ಸಂಧಾನದ ಮೂಲಕ ಹೆಚ್ಚಿನ ಪ್ರಕರಣಗಳು ಇತ್ಯಾರ್ಥವಾಗಿದ್ದು ಈ ಲೋಕ ಅದಾಲತ್‌ನ ವಿಶೇಷತೆಯಾಗಿತ್ತು.

Advertisement

ಕೌಟುಂಬಿಕ ಭಿನ್ನಾಭಿಪ್ರಾಯ, ಹಣಕಾಸು ಸಮಸ್ಯೆ, ಕುಡಿತ, ಸೋಮಾರಿತನ, ಅನುಮಾನ ಹೀಗೆ ನಾನಾ ಕಾರಣಕ್ಕೆ ಸಂಸಾರದಲ್ಲಿನ ಸಮಸ್ಯೆಯಿಂದ ವಿಚ್ಛೇದನ ಕೋರಿ 14 ಜೋಡಿಗಳು ನ್ಯಾಯಾಲಯದ ಮೆಟ್ಟಿಲು ಏರಿದ್ದರು.

ಜಿಲ್ಲೆಯಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ ಹಿನ್ನೆಲೆಯಲ್ಲಿ ಜಿಲ್ಲೆಯ ಕೊಪ್ಪಳ, ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾ ನ್ಯಾಯಾಲಯಗಳ ಆವರಣದಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ನಾಲ್ಕು ನ್ಯಾಯಾಲಯದಲ್ಲಿನ ನ್ಯಾಯಾಧೀಶರು ಹಾಗೂ ವಕೀಲರು ಸೇರಿ ಸಮಸ್ಯೆಯ ಬಗ್ಗೆ ಆಪ್ತ ಸಮಾಲೋಚನೆ ನಡೆಸುವ ಮೂಲಕ ಹದಿನಾಲ್ಕು ಜೋಡಿಗಳ ಸಂಸಾರದಲ್ಲಿನ ಅಪಸವ್ಯವನ್ನು ಹೋಗಲಾಡಿಸಿದರು.

ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪೈಕಿ ಕೊಪ್ಪಳ ನ್ಯಾಯಾಲಯದಲ್ಲಿ ಐದು ಜೋಡಿಗಳು, ಗಂಗಾವತಿ ತಾಲೂಕಿನಲ್ಲಿ ಎಂಟು ಜೋಡಿಗಳು ಹಾಗೂ ಯಲಬುರ್ಗಾ ತಾಲೂಕಿನಲ್ಲಿ ಒಂದು ಜೋಡಿಯು ಸಿಡಿಲು ಬಡಿದಂತೆ ಸಮಸ್ಯೆಯನ್ನು ಹೊತ್ತು ನ್ಯಾಯಾಲಯಕ್ಕೆ ಬಂದಿದ್ದರು. ಈ ಹದಿನಾಲ್ಕು ಜೋಡಿಗಳ ಬಗ್ಗೆ ವಿಶೇಷ ಕಾಳಜಿ ವಹಿಸಿದ ನ್ಯಾಯಾಧೀಶರು ಹಾಗೂ ವಕೀಲರು, ಮರು ಹೊಂದಾಣಿಕೆ ಮಾಡಿ ಸುಳಿಗಾಳಿಗೆ ಸಿಲುಕಿದ್ದ ಸಂಸಾರಗಳನ್ನು ಹಾಲು-ಜೇನಿನಂತೆ ಮತ್ತೆ ಹೊಂದಾಣಿಕೆ ಮಾಡಿದರು.

ಇದು ಕಥೆಯಲ್ಲ, ಜೀವನ ಎಂದು ನ್ಯಾಯಾಧೀಶರು ಮತ್ತು ವಕೀಲರು ಆ ಜೋಡಿಗಳಿಗೆ ಅರಿವಿನ ಜ್ಞಾನ ಮೂಡಿಸಿದರು. ಅಜ್ಞಾನದ ದಾರಿಯನ್ನು ತಪ್ಪಿಸಿ ಜೀವನದ ಪಯಣದತ್ತ ಸಾಗಲು ತಿಳಿಸಿದ ಕೊಪ್ಪಳ ಜಿಲ್ಲೆಯ ಎಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ವಕೀಲರುಗಳ ಸಮ್ಮುಖದಲ್ಲಿ ನ್ಯಾಯಾಲಯಗಳಲ್ಲಿನ ಆವರಣದಲ್ಲಿ ಸಾರ್ವಜನಿಕರ ಎದುರಿನಲ್ಲಿ ಹೂವಿನ ಹಾರ ಬದಲಿಸಿಕೊಂಡು ಸಂಸಾರದ ಮತ್ತೊಂದು ಮಗ್ಗಲಿಗೆ 14 ಜೋಡಿಗಳು ಹೊಸ ಹೆಜ್ಜೆ ಹಾಕಿದರು.

3328 ಪ್ರಕರಣಗಳು ಇತ್ಯರ್ಥ

ಇದೇ ಸಂದರ್ಭದಲ್ಲಿ ವಿಮೆ, ನೀರಿನ ಬಿಲ್, ಬ್ಯಾಂಕ್ ಸಾಲ, ಮನೆ ಕರ, ಕೌಟುಂಬಿಕ ದೌರ್ಜನ್ಯ, ಜೀವನಾಂಶ, ಚೆಕ್ ಬೌನ್ಸ್ ಪ್ರಕರಣಗಳು, ಜನನ-ಮರಣ ದಾಖಲೆ, ಸಿವಿಲ್ ಕೇಸ್, ಕ್ರಿಮಿನಲ್ ಕೇಸ್, ಮೋಟಾರ್ ವಾಹನ ಅಪಘಾತ, ಎಂಎಂಆರ್‌ಡಿ ಪ್ರಕರಣಗಳು ಸೇರಿದಂತೆ ಕೊಪ್ಪಳ, ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾ ನ್ಯಾಯಾಲಯಗಳಲ್ಲಿ ಒಟ್ಟು 4182 ಪ್ರಕರಣಗಳ ಪೈಕಿ 3328 ಪ್ರಕರಣಗಳನ್ನು ಇತ್ಯರ್ಥ ಮಾಡಲಾಯಿತು.


Spread the love

LEAVE A REPLY

Please enter your comment!
Please enter your name here