ಪ್ರತಿ ವರ್ಷ ಮಳೆಗಾಲ ಶುರುವಾಯ್ತು ಎಂದರೆ ಸೊಳ್ಳೆಗಳ ಕಾಟ ಶುರು ಎಂದರ್ಥ ಈ ಸಮಯದಲ್ಲಿ ಈಡಿಸ್ ಈಜಿಪ್ಟೈ ಸೊಳ್ಳೆ ಕಚ್ಚುವುದರಿಂದ ಡೆಂಗ್ಯೂ ಜ್ವರ ಹರಡುತ್ತದೆ. ಒಬ್ಬ ವ್ಯಕ್ತಿಗೆ ಡೆಂಗ್ಯೂ ಹರಡುವ ಸೊಳ್ಳೆ ಮತ್ತೊಬ್ಬ ವ್ಯಕ್ತಿಗೆ 4 ರಿಂದ 6 ದಿನಗಳಲ್ಲಿ ಡೆಂಗ್ಯೂ ಜ್ವರ ಬರುತ್ತದೆ.
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿದೆ. ಇನ್ನೂಸಿಲಿಕಾನ್ ಸಿಟಿಯಲ್ಲಿ ಡೆಂಗ್ಯು ಜ್ವರದಿಂದ ಬಳಲುತ್ತಿದ್ದ ಹೆಡ್ ಕಾನ್‌ಸ್ಟೇಬಲ್ ಒಬ್ಬರು ಸಾವಿಗೀಡಾಗಿದ್ದಾರೆ. ಇದರೊಂದಿಗೆ, ಬೆಂಗಳೂರಿನಲ್ಲಿ ಡೆಂಗ್ಯುವಿಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೇರಿದೆ. ರಾಜ್ಯದಲ್ಲಿ ಇದುವರೆಗೆ 11 ಮಂದಿ ಡೆಂಗ್ಯು ಜ್ವರದಿಂದ ಮೃತಪಟ್ಟಿದ್ದಾರೆ.
ಇನ್‌ಫ್ಯಾಂಟ್ರಿ ರಸ್ತೆಯ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ CCRB ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಮಶೇಖರ್, ಡೆಂಗ್ಯು ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ.