ಹಾಸನ:- ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಶೆಟ್ಟಿಹಳ್ಳಿ ಬಳಿಯ ಮೇಲ್ ಸೇತುವೆ ಬಳಿ ಜರುಗಿದೆ.
Advertisement
ಬೆಂಗಳೂರು ಸಂಜಯ ನಗರದ ಮೀನಾಕ್ಷಿ, ಚನ್ನರಾಯಪಟ್ಟಣ ಮೂಲದ ಪ್ರತಾಪ್ ಮೃತ ದುರ್ದೈವಿಗಳು. ಬೆಂಗಳೂರಿನಿಂದ ಹಾಸನದ ಕಡೆಗೆ ಟಯೋಟಾ ಕ್ರಾಮಿ ಕಾರು ಬರುತ್ತಿತ್ತು. ಹಾಸನದ ಕಡೆಯಿಂದ ಚನ್ನರಾಯಪಟ್ಟಣ ಕಡೆಗೆ ಎರಿಟಿಗಾ ಕಾರು ತೆರಳುತ್ತಿತ್ತು. ಈ ವೇಳೆ ಶೆಟ್ಟಿಹಳ್ಳಿ ಮೇಲ್ಸೇತುವೆ ಬಳಿ ಎರಡು ಕಾರುಗಳ ನಡುವೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.
ಡಿಕ್ಕಿ ರಭಸಕ್ಕೆ ಎರಡು ಕಾರುಗಳು ಸಂಪೂರ್ಣ ಜಖಂಗೊಂಡಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.