ಕೋಲಾರ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಕೇಬಲ್ ಆಪರೇಟರ್ ಸ್ಥಳದಲ್ಲೆ ಸಾವನ್ನಪ್ಪಿದ್ದು, ಮತ್ತೊಬ್ಬ ಬೈಕ್ ಸವಾರನಿಗೆ ಗಾಯಗಳಾಗಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ತೊಪ್ಪನಹಳ್ಳಿ ಬಳಿ ನಡೆದಿದೆ.
Advertisement
ರಾತೇನಹಳ್ಳಿ ಮೂಲದ ವೆಂಕಟರೆಡ್ಡಿ(46) ಮೃತ ದುರ್ಧೈವಿಯಾಗಿದ್ದು, ಬೋಯಲೂರು ಮೂಲದ ಅಂಬರೀಶ್(22) ಗಾಯಗೊಂಡ ಯುವಕನಾಗಿದ್ದು, ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕಾಮಸಮುದ್ರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಲಾಗಿದೆ.