ಶಿವಮೊಗ್ಗ: ಖಾಸಗಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಮುರುಘಮಠದ ಸಮೀಪ ಜರುಗಿದೆ. ದೊಡ್ಡಬಳ್ಳಾಪುರ ಮೂಲದ ಅಕ್ಷಯ್ (22), ಶರಣ್ (28) ಮೃತ ದುರ್ಧೈವಿಗಳಾಗಿದ್ದು,
Advertisement
ಕಾರು ಸಾಗರದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿತ್ತು. ಬಸ್ಸು ಶಿವಮೊಗ್ಗದಿಂದ ಸಾಗರ ಕಡೆಗೆ ತೆರಳುತ್ತಿತ್ತು. ಈ ವೇಳೆ ದುರ್ಘಟನೆ ನಡೆದಿದೆ. ಮೃತರು ಕಾರಿನಲ್ಲಿ ಪ್ರವಾಸಕ್ಕೆ ಬಂದಿದ್ದರು ಎನ್ನಲಾಗಿದೆ. ಇನ್ನು ಸ್ಥಳಕ್ಕೆ ಆನಂದಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.