ಗದಗ:- ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಗದಗ ತಾಲೂಕಿನ ಬೆಳದಡಿ ಗ್ರಾಮದ ಹೊರವಲಯದಲ್ಲಿ ನಿನ್ನೆ ರಾತ್ರಿ ಜರುಗಿದೆ.
ವಿನಾಯಕ ಬಡಿಗೇರ್( 30) ಮೃತ ಬೈಕ್ ಸವಾರ. ಈತ ಶಿರಹಟ್ಟಿ ತಾಲೂಕಿನ ಅಳಗನವಾಡಿ ನಿವಾಸಿ ಎನ್ನಲಾಗಿದೆ. ಗದಗದಿಂದ ಅಳಗನವಾಡಿ ಕಡೆಗೆ ಹೋಗುತ್ತಿದ್ದ ವೇಳೆ ಎದುರಿನಿಂದ ಬಂದ ಬೈಕ್‌ಗೆ ಮುಖಾಮುಖಿ ಡಿಕ್ಕಿಯಾಗಿದ್ದರಿಂದ ಈ ದುರಂತ ಸಂಭವಿಸಿದೆ.
ಅಪಘಾತದಲ್ಲಿ ಶ್ರೀಕಾಂತ್ ಮತ್ತು ಯಲ್ಲಪ್ಪ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗದಗ ಗ್ರಾಮೀಣ ಠಾಣೆಯ ಪಿಎಸ್‌ಐ ವಿಜಯ ಪವಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.



