ಬೆಳಗಾವಿ: ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಎರಡು ಬೈಕ್ಗಳ ಮಧ್ಯೆ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಲಾಯಪ್ಪ ಪುಂಡಲಿಕ ಮರಗಾಳೆ (45) ಮೃತ ದುರ್ಧೈವಿಯಾಗಿದ್ದು, ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಎರಡು ಬೈಕ್ ನಡುವೆ ಭಯಾನಕವಾದ ಡಿಕ್ಕಿ ಸಂಭವಿಸಿದೆ.
ಇದರಿಂದ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನೊಬ್ಬ ಸವಾರ ಮಲ್ಲಪ್ಪ ಗುರಬಸು ಮಂಟೂರು ಎನ್ನುವರು ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುವನ್ನು ಅಥಣಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆ ಸಂಬಂಧ ಐಗಳಿ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



