ಆನೇಕಲ್;-ಆನೇಕಲ್ಲಿನ ಕಾವಲ ಹೊಸಹಳ್ಳಿ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ.
Advertisement
ಬುಲೆಟ್ ಹಾಗೂ ಆರ್ ಒನ್ ಫೈವ್ ಯಮಹ ಬೈಕ್ ನಡುವೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ಗಳು ನಜ್ಜುಗುಜ್ಜಾಗಿದೆ. ಮೃತ ದೇಹ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಗಾಯಗೊಂಡ ಬೈಕ್ ಸವಾರರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.